ಶ್ರೀನಗರ(ಜಮ್ಮು-ಕಾಶ್ಮೀರ):ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧನೋರ್ವ ರಜೆಯ ಮೇಲೆ ಮನೆಗೆ ಬಂದಿದ್ದ ವೇಳೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಶೋಪಿಯಾನ್ನಲ್ಲಿ ಈ ಘಟನೆ ನಡೆದಿದೆ.
ಸಿಆರ್ಪಿಎಫ್ನಲ್ಲಿ ಯೋಧನಾಗಿದ್ದ ಮುಖ್ತಾರ್ ಅಹ್ಮದ್ ಮೇಲೆ ಗುಂಡಿನ ದಾಳಿ ನಡೆಸಿರುವ ಉಗ್ರರು ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ತಕ್ಷಣವೇ ಯೋಧನನ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಹುತಾತ್ಮರಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರ ಪೊಲೀಸ್ ಇಲಾಖೆ ಟ್ವೀಟ್ ಮಾಡಿದೆ.
ಕಳೆದ ಎರಡು ದಿನಗಳಿಂದ ಕಣಿವೆ ನಾಡಿನಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗಿದ್ದು, ಇಬ್ಬರು ಸರಪಂಚ್ರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಶನಿವಾರ ಬೆಳಗ್ಗೆ ಗುಂಡಿನ ದಾಳಿ ನಡೆಸಿ ಮತ್ತೋರ್ವ ಸರಪಂಚ್ನನ್ನ ಗಾಯಗೊಳಿಸಿರುವ ಉಗ್ರರು, ಇದೀಗ ಯೋಧನ ಹತ್ಯೆ ಮಾಡಿದ್ದಾರೆ.
ಇದನ್ನೂ ಓದಿರಿ:ಪಂಚರಾಜ್ಯ ಸೋಲು: ಸೋನಿಯಾ, ಪ್ರಿಯಾಂಕಾ, ರಾಹುಲ್ ರಾಜೀನಾಮೆ ಸುದ್ದಿ ಅಲ್ಲಗಳೆದ ಕಾಂಗ್ರೆಸ್
ಕಳೆದ ವರ್ಷ ಜುಲೈ ತಿಂಗಳಲ್ಲೂ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ CRPF ಯೋಧನ ಮನೆಯೊಳಗೆ ನುಗ್ಗಿದ ಉಗ್ರರು ಗುಂಡಿಕ್ಕಿ ಹತ್ಯೆಗೈದಿದ್ದರು. ಈ ವೇಳೆ ಕೂಡ ಯೋಧ ರಜೆಯ ಮೇಲೆ ಮನೆಗೆ ಬಂದಿದ್ದನು.