ಪುಲ್ವಾಮಾ (ಜಮ್ಮು-ಕಾಶ್ಮೀರ): ಭದ್ರತಾ ಪಡೆಯನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ್ದ ಗ್ರೆನೇಡ್ ದಾಳಿಯಲ್ಲಿ ಎಂಟು ಮಂದಿ ನಾಗರಿಕರು ಗಾಯಗೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಬಸ್ ನಿಲ್ದಾಣದ ಮೇಲೆ ಗ್ರೆನೇಡ್ ಎಸೆದಿದ್ದು, ಗುರಿತಪ್ಪಿ ರಸ್ತೆಯ ಮೇಲೆ ಬಿದ್ದು ಸ್ಫೋಟಗೊಂಡಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.