ಶ್ರೀನಗರ, ಜಮ್ಮು ಮತ್ತು ಕಾಶ್ಮೀರ :ಯೋಧನ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಶ್ರೀನಗರದಲ್ಲಿರುವ ಬಾದಾಮಿಬಾಗ್ ಕಂಟೋನ್ಮೆಂಟ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಂಟೋನ್ಮೆಂಟ್‌ನ ಸ್ಟೋರ್ ರೂಮ್ನಲ್ಲಿ ಮಧ್ಯಾಹ್ನ 1.20ಕ್ಕೆ ಸಿಗ್ನಲ್ ಮ್ಯಾನ್ ಅನುಜ್ ಸಿಂಗ್ ಅವರ ಮೃತದೇಹ ಪತ್ತೆಯಾಗಿದೆ ಎಂದು ಸೇನಾ ವಕ್ತಾರರು ಮಾಹಿತಿ ನೀಡಿದ್ದಾರೆ. ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದು, ತನಿಖೆ ನಡೆಸುತ್ತಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.