ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆಯ ಬಳಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸದೆಬಡಿದು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಾಕಿಸ್ತಾನದ ಗಡಿಯಲ್ಲಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಿದ ಭದ್ರತಾ ಸಿಬ್ಬಂದಿ - ಜಮ್ಮು ಮತ್ತು ಕಾಶ್ಮೀರ ಪೊಲೀಸರು
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಸಿಬ್ಬಂದಿ ಎನ್‌ಕೌಂಟರ್ ಮಾಡಿದ್ಧಾರೆ.
ಪಾಕಿಸ್ತಾನದ ಗಡಿಯಲ್ಲಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಿದ ಭದ್ರತಾ ಸಿಬ್ಬಂದಿ
ಕುಪ್ವಾರ ಜಿಲ್ಲೆಯ ಮಚಿಲ್ ಸಮೀಪದ ಟೆಕ್ರಿ ನಾರ್ನಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡಿವೆ. ಹತ ಉಗ್ರರ ಬಳಿಯಿದ್ದ ಎರಡು ಎಕೆ 47 ರೈಫಲ್‌ಗಳು, ಎರಡು ಪಿಸ್ತೂಲ್‌ಗಳು ಮತ್ತು ನಾಲ್ಕು ಹ್ಯಾಂಡ್ ಗ್ರೆನೇಡ್‌ಗಳನ್ನು ಜಪ್ತಿ ಮಾಡಲಾಗಿದೆ. ಹತ್ಯೆಗೀಡಾದ ಉಗ್ರರ ಗುರುತು ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಕಾಶ್ಮೀರ ಕಣಿವೆಯಲ್ಲಿ ಹೊರ ರಾಜ್ಯದ ಕಾರ್ಮಿಕರ ಮೇಲೆ ಮತ್ತೆ ದಾಳಿ..ಆತಂಕದಲ್ಲಿ ಕೆಲಸಗಾರರು!