ಕರ್ನಾಟಕ

karnataka

ETV Bharat / bharat

ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರ ದಾಳಿ: ಓರ್ವ ಪೊಲೀಸ್​ ಹುತಾತ್ಮ, ಮೂವರಿಗೆ ಗಾಯ - ಕುಲ್ಗಾಮ್ ಪೋಶ್ವಾನ್ ಪ್ರದೇಶದಲ್ಲಿ ಉಗ್ರರ ದಾಳಿ

ಕುಲ್ಗಾಮ್ ಜಿಲ್ಲೆಯ ಪೋಶ್ವಾನ್ ಪ್ರದೇಶದಲ್ಲಿ ಪೊಲೀಸರು ಟ್ರಾಫಿಕ್ ನಿರ್ವಹಣೆ ಕಾರ್ಯದಲ್ಲಿ ನಿರತರಾಗಿದ್ದಾಗ ಭಯೋತ್ಪಾದಕರಿಂದ ಗುಂಡಿನ ದಾಳಿ ನಡೆದಿದೆ.

J-K: One policeman killed, 2 injured after terrorists opened fire at police party
ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರ ದಾಳಿ: ಓರ್ವ ಪೊಲೀಸ್​ ಹುತಾತ್ಮ, ಮೂವರಿಗೆ ಗಾಯ

By

Published : Aug 8, 2021, 5:09 AM IST

ಕುಲ್ಗಾಮ್:ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಪೋಶ್ವಾನ್ ಪ್ರದೇಶದಲ್ಲಿ ಭಯೋತ್ಪಾದಕರು ಶನಿವಾರ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭಯೋತ್ಪಾದಕರ ದುಷ್ಕೃತ್ಯದ ವೇಳೆ ಓರ್ವ ಪೊಲೀಸ್ ಹುತಾತ್ಮರಾಗಿದ್ದು, ಇತರ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ.

ಕಾನ್​ಸ್ಟೇಬಲ್ ನಿಸಾರ್ ಅಹ್ಮದ್ ಮೃತಪಟ್ಟವರೆಂದು ಗುರುತಿಸಲಾಗಿದೆ. ಗಾಯಗೊಂಡ ಸಿಬ್ಬಂದಿಯ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪ್ರಕಾರ, ಟ್ರಾಫಿಕ್ ನಿರ್ವಹಣೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆ ಭಯೋತ್ಪಾದಕರಿಂದ ದಾಳಿ ನಡೆದಿದೆ. ಸದ್ಯ ಸ್ಥಳದಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದ್ದು, ಉಗ್ರರ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ABOUT THE AUTHOR

...view details