ಶೋಪಿಯಾನ್: ಜಮ್ಮು- ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್ - ಎ - ತೈಬಾದ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದು,"ನಿಷೇಧಿತ ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್ ಇಶ್ಫಾಕ್ ದಾರ್ ಅಲಿಯಾಸ್ ಅಬು ಅಕ್ರಮ್ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. 2017 ರಿಂದ ಅಕ್ರಮ್ ಉಗ್ರ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾನೆ" ಎಂದರು.