ಕರ್ನಾಟಕ

karnataka

ETV Bharat / bharat

ದೆಹಲಿಯ ಜಹಾಂಗಿರ್​ಪುರಿ ಹಿಂಸಾಚಾರ: ತನಿಖಾಧಿಕಾರಿಗಳ ಮೇಲೆ ಕಲ್ಲು ತೂರಾಟ

ದೆಹಲಿಯ ವಾಯುವ್ಯ ಭಾಗದ ಜಹಾಂಗಿರ್‌ಪುರಿ ಪ್ರದೇಶದಲ್ಲಿ ಶನಿವಾರ ಹನುಮ ಜಯಂತಿಯ ಶೋಭಾಯಾತ್ರೆಯ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣದ ವಿಚಾರಣೆ ನಡೆಸಲು ಬಂದ ತನಿಖಾಧಿಕಾರಿಗಳ ಮೇಲೆಯೇ ಇವತ್ತು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

Jahangirpuri violence
Jahangirpuri violence

By

Published : Apr 18, 2022, 3:45 PM IST

ಜಹಾಂಗಿರ್​ಪುರಿ(ನವದೆಹಲಿ):ಜಹಾಂಗಿರ್‌ಪುರಿ ಪ್ರದೇಶದಲ್ಲಿ ಹನುಮಾನ್ ಜನ್ಮೋತ್ಸವ ಮೆರವಣಿಗೆಯ ಸಮಯದಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ಉಂಟಾಗಿ ಹಿಂಸಾಚಾರ ನಡೆದಿತ್ತು. ಕಲ್ಲು ತೂರಾಟ ನಡೆಸಿದ್ದ ಪರಿಣಾಮ ಕೆಲ ಪೊಲೀಸರು ಗಾಯಗೊಂಡಿದ್ದು, ವಾಹನಗಳು ಜಖಂಗೊಂಡಿದ್ದವು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪೊಲೀಸ್ ಇಲಾಖೆ ಪ್ರಕರಣದ ತನಿಖೆ ನಡೆಸುತ್ತಿದೆ.

ಹಿಂಸಾಚಾರದ ವೇಳೆ ಪೊಲೀಸ್ ಸಬ್​ ಇನ್ಸ್​ಪೆಕ್ಟರ್​ ಮೇಲೆ ಗುಂಡು ಹಾರಿಸಿದ್ದ ಘಟನೆಯೂ ನಡೆದಿತ್ತು. ಕೃತ್ಯವೆಸಗಿರುವ ಆರೋಪಿ ಮನೆಗೆ ಇಂದು ಪೊಲೀಸರ ತಂಡ ತೆರಳಿದ್ದು, ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ದೆಹಲಿ ಪೊಲೀಸ್ ಕಮಿಷನರ್​​ ರಾಕೇಶ್​ ಆಸ್ತಾನ​, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 23 ಜನರ ಬಂಧನ ಮಾಡಲಾಗಿದೆ. ಸಣ್ಣ ವಿಚಾರಕ್ಕಾಗಿ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ಆರಂಭಗೊಂಡಿದ್ದು, ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಅದರ ಆಧಾರದ ಮೇಲೆ ಆರೋಪಿಗಳ ಬಂಧನ ಮಾಡಲಾಗಿದೆ ಎಂದರು.

ಇದನ್ನೂ ಓದಿ:ಒಂದಲ್ಲ, ಎರಡಲ್ಲ, ಬರೋಬ್ಬರಿ 67 ಅಪರಾಧ ಪ್ರಕರಣ; ಇಬ್ಬರು ವೃದ್ಧೆಯರ ಬಂಧನ

ABOUT THE AUTHOR

...view details