ಜೈಪುರ: ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದಲ್ಲಿ ಬಂಧಿತನಾದ ಮತ್ತೊಬ್ಬ ಆರೋಪಿಯನ್ನು ಜುಲೈ 12 ರವರೆಗೆ ಎನ್ಐಎ ಕಸ್ಟಡಿಗೆ ನೀಡಲಾಗಿದೆ. ಅಧಿಕಾರಿಗಳು ಇಂದು ಆರೋಪಿ ಮೊಹಮ್ಮದ್ ಮೊಹ್ಸಿನ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ.
ಪ್ರಕರಣದ ವಿಚಾರಣೆಯ ನಂತರ ನ್ಯಾಯಾಲಯವು ಮೊಹಮ್ಮದ್ ಮೊಹ್ಸಿನ್ ಅವರನ್ನು ಜುಲೈ 12 ರವರೆಗೆ ಎನ್ಐಎ ವಶಕ್ಕೆ ನೀಡಿದೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಟಿಪಿ ಶರ್ಮಾ ಮಾಹಿತಿ ನೀಡಿದ್ದಾರೆ. ಲಾಲ್ನನ್ನು ಕೊಲ್ಲುವ ಸಂಚು ಮತ್ತು ಆತನ ಅಂಗಡಿಯ ವಿಚಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಕ್ಕಾಗಿ ಮೊಹ್ಸಿನ್‌ನನ್ನು ಸೋಮವಾರ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.