ಶ್ರೀನಗರ(ಜಮ್ಮು ಮತ್ತು ಕಾಶ್ಮೀರ):ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಜಮ್ಮು- ಕಾಶ್ಮೀರ, ರಂಬನ್ ಪ್ರದೇಶದ 14 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಲಷ್ಕರ್-ಎ-ಮುಸ್ತಾಫ ಸಂಘಟನೆಯ ಮುಖ್ಯಸ್ಥ ಹಿದಾಯತ್ ಉಲ್ಲಾ ಮಲಿಕ್ನನ್ನು ಬಂಧಿಸಲಾಗಿದ್ದು, ಐದು ಕೆ.ಜಿ ಐಇಡಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತರ ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.