ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ಪಟ್ಟಣದ ಬಳಿ ಭಾರಿ ಪ್ರಮಾಣದಲ್ಲಿ ಬೆಟ್ಟ ಕುಸಿತವಾದ ಪರಿಣಾಮ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ.
ಬಂಡೆಗಳು ಬೆಟ್ಟದಿಂದ ಕರ್ವ್ ಹೆದ್ದಾರಿಯ ಪಕ್ಕದ ರಸ್ತೆಯ ಮೇಲೆ ಬಿದ್ದ ಬಳಿಕ ಆಳವಾದ ಕಾಲುವೆಗೆ ಉರುಳಿ ಬೀಳುತ್ತಿರುವ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಶಬಾನ್‌ಬಾಸ್ ಪ್ರದೇಶದಲ್ಲಿ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸಂಚಾರ ಪೊಲೀಸರು ತಿಳಿಸಿದ್ದಾರೆ. ಕಾಶ್ಮೀರವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ರಸ್ತೆ ಇದಾಗಿದೆ.