ಕರ್ನಾಟಕ

karnataka

ETV Bharat / bharat

ಜನಾರ್ದನ ರೆಡ್ಡಿ ಜಾಮೀನು ಷರತ್ತುಗಳನ್ನು ಸಡಿಲಿಸಲು ನಿರಾಕರಿಸಿದ ಸುಪ್ರೀಂಕೋರ್ಟ್..ಬಳ್ಳಾರಿಗೆ ಹೋಗುವ ಆಸೆಗೆ ತಣ್ಣೀರು! - Janardhana Reddy

ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಗಾಲಿ ಜನಾರ್ದನ ರೆಡ್ಡಿ ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.

Supreme Court
ಜನಾರ್ದನ ರೆಡ್ಡಿ

By

Published : Apr 19, 2023, 5:22 PM IST

ನವದೆಹಲಿ:ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿ ಗಾಲಿ ಜನಾರ್ದನರೆಡ್ಡಿ ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಕೋರ್ಟ್​​​ ಷರತ್ತುಗಳಲ್ಲಿ ಸಡಿಲಿಕೆ ಮಾಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಗಾಲಿ ಜನಾರ್ದನ ರೆಡ್ಡಿ ಅವರು ಬಳ್ಳಾರಿಗೆ ಹೋಗಲು ಅವಕಾಶ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ನ್ಯಾಯಮೂರ್ತಿ ಎಂ.ಆರ್.ಷಾ ಮತ್ತು ನ್ಯಾಯಮೂರ್ತಿ ಸುಂದರೇಶ್ ಅವರನ್ನೊಳಗೊಂಡ ಪೀಠವು, ಗಾಲಿ ಜನಾರ್ದನ ರೆಡ್ಡಿ ಅವರ ಮನವಿಯನ್ನು ವಜಾ ಮಾಡಿದೆ. ಜಾಮೀನು ಷರತ್ತುಗಳನ್ನು ಸಡಿಲಿಸಲು ಸಾಧ್ಯವಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಚುನಾವಣೆಯ ನಂತರ ಮತ್ತೊಮ್ಮೆ ನ್ಯಾಯಾಲಯಕ್ಕೆ ಬರಲು ಅವಕಾಶ ನೀಡುವಂತೆ ಮತ್ತು ಅರ್ಜಿಯನ್ನು ಹಿಂಪಡೆಯಲು ಅವಕಾಶ ನೀಡುವಂತೆ ಗಾಲಿ ಅವರ ವಕೀಲರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಜನಾರ್ದನ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯ ಪೀಠ ವಜಾಗೊಳಿಸಿದೆ.

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಜನಾರ್ದನ ರೆಡ್ಡಿ: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್‌ನಿಂದ ಪರಿಹಾರ ದೊರೆಯಲಿಲ್ಲ. ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜಾಮೀನು ನೀಡಿರುವ ಸಂದರ್ಭದಲ್ಲಿ ವಿಧಿಸಿರುವ ಷರತ್ತುಗಳನ್ನು ಬದಲಾಯಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಂ.ಆರ್.ಷಾ ನೇತೃತ್ವದ ಪೀಠ ಅರ್ಜಿಯ ವಿಚಾರಣೆಗೆ ನಿರಾಕರಿಸಿತು.

ಇದನ್ನೂ ಓದಿ:ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ವಿಡಿಯೋ

ಈ ಹಿಂದೆ ಬಳ್ಳಾರಿಯಲ್ಲಿ ನೆಲೆಸಲು ರೆಡ್ಡಿಗೆ ಕೋರ್ಟ್​ ಅನುಮತಿ ಕೊಟ್ಟಿತ್ತು:ವಾಸ್ತವವಾಗಿ, 2015ರಿಂದ ಬಳ್ಳಾರಿಗೆ ಹೋಗದಂತೆ ರೆಡ್ಡಿಗೆ ನ್ಯಾಯಾಲಯ ನಿರ್ಬಂಧ ವಿಧಿಸಿತ್ತು. 2022ರ ಅಕ್ಟೋಬರ್ 10ರಂದು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಕರ್ನಾಟಕದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ತಮ್ಮ ಮಗಳನ್ನು ಭೇಟಿಯಾಗುವ ಸಲುವಾಗಿ ಬಳ್ಳಾರಿಗೆ ಭೇಟಿ ನೀಡಲು ಸುಪ್ರೀಂಕೋರ್ಟ್ ಅನುಮತಿ ನೀಡಿತ್ತು. 2022ರ ನವೆಂಬರ್ 6ರವರೆಗೆ ಬಳ್ಳಾರಿಯಲ್ಲಿ ನೆಲೆಸಲು ರೆಡ್ಡಿಗೆ ನ್ಯಾಯಾಲಯ ಫರ್ಮಿಷನ್​ ನೀಡಿತ್ತು.

ಇದನ್ನೂ ಓದಿ:ಬೆಸ್ಕಾಂ ಹೆಸರಲ್ಲಿ ನಕಲಿ ನೇಮಕಾತಿ ಪ್ರಮಾಣಪತ್ರ: ವಂಚನೆ ವಿರುದ್ಧ ದೂರು ದಾಖಲು

ಮೈನಿಂಗ್ ಕಂಪನಿ ಕೇಂದ್ರ ಕಚೇರಿಗೆ ಭೇಟಿ ನೀಡದಂತೆ ಕೋರ್ಟ್​ ಸೂಚಿಸಿತ್ತು:2017ರ ಅಕ್ಟೋಬರ್‌ನಲ್ಲಿ ಸುಪ್ರೀಂಕೋರ್ಟ್ ರೆಡ್ಡಿಗೆ ಜಾಮೀನು ನೀಡುವಾಗ ಅವರು ಹುಟ್ಟೂರು ಬಳ್ಳಾರಿಗೆ ಹೋಗದಂತೆ ಷರತ್ತು ವಿಧಿಸಿತ್ತು. ಅವರ ಮೈನಿಂಗ್ ಕಂಪನಿಯ ಕೇಂದ್ರ ಕಚೇರಿ ಕಡಪಾಗೆ ಭೇಟಿ ನೀಡದಂತೆಯೂ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಕೈಗೊಂಡಿತ್ತು. ಅಕ್ರಮ ಗಣಿಗಾರಿಕೆ ಸೇರಿದಂತೆ ಇತರ ಪ್ರಕರಣಗಳಲ್ಲಿ ಜಾಮೀನು ನೀಡಿರುವ ಸಂದರ್ಭದಲ್ಲಿ ವಿಧಿಸಿರುವ ಷರತ್ತುಗಳನ್ನು ಬದಲಾಯಿಸುವಂತೆ ಒತ್ತಾಯಿಸಿ ಮಾಜಿ ಸಚಿವ ಜಿ.ಜನಾರ್ದನರೆಡ್ಡಿ, ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸದ್ಯ ರೆಡ್ಡಿ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಇದನ್ನೂ ಓದಿ:ಅಮೆರಿಕದಲ್ಲಿ ಮತ್ತೆ ಗುಂಡಿನ ದಾಳಿ: ಮನೆಯಲ್ಲಿ 4 ಶವ ಪತ್ತೆ, ಮೂವರಿಗೆ ಗಾಯ

ABOUT THE AUTHOR

...view details