ಹೈದರಾಬಾದ್: ತನ್ನ 73 ನೇ ಹುಟ್ಟುಹಬ್ಬವನ್ನು ಇಂದು ಆಚರಿಸುತ್ತಿರುವ ಹಿರಿಯ ನಟಿ ಮತ್ತು ರಾಜಕಾರಣಿ ಜಯಾ ಬಚ್ಚನ್ ಅಂತರ್ಜಾಲದಲ್ಲಿ ಟ್ರೋಲ್ ಪೇಜ್ಗಳಿಗೆ ಆಹಾರವಾಗಿದ್ದಾರೆ. ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ರೋಡ್ ಶೋ ಸಂದರ್ಭದಲ್ಲಿ ವ್ಯಕ್ತಿಯನ್ನು ತಳ್ಳಿದ್ದಕ್ಕಾಗಿ ಜಯಾ ಅವರು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ನಾಲ್ಕು ದಿನಗಳ ಚುನಾವಣಾ ಪ್ರಚಾರದಲ್ಲಿರುವ ಜಯಾ ಬಚ್ಚನ್, ನಿರ್ಣಾಯಕ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಬೆಂಬಲವನ್ನು ನೀಡಲು ಮೆರವಣಿಗೆಗಳು ಮತ್ತು ರೋಡ್ ಶೋಗಳನ್ನು ನಡೆಸುತ್ತಿದ್ದಾರೆ. ಶುಕ್ರವಾರ, ಜಯಾ ಅವರು ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಅವರು ಬ್ಯಾನರ್ಜಿಯ ಸಾಧನೆ ಮತ್ತು ತೃಣಮೂಲ ಕಾಂಗ್ರೆಸ್ ಪರವಾಗಿ ಏಕೆ ಮತ ಚಲಾಯಿಸಿದರು ಎಂಬುದರ ಕುರಿತು ಸಭೆಯಲ್ಲಿ ಮಾತನಾಡಿದರು.