ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 27ರಿಂದ 30ರವರೆಗೆ ನಡೆಯಬೇಕಿದ್ದ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಜೆಇಇ (ಮೇನ್ಸ್) ಪರೀಕ್ಷೆಯನ್ನು ಮುಂದೂಡಲಾಗಿದೆ.
ಕೊರೊನಾ ಪರಿಣಾಮ: ಜೆಇಇ (ಮುಖ್ಯ) ಪರೀಕ್ಷೆ ಮುಂದೂಡಿಕೆ - Engineering entrance exam JEE-Mains
ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಜೆಇಇ (ಮೇನ್ಸ್) ಪರೀಕ್ಷೆ ಮುಂದೂಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ತಿಳಿಸಿದ್ದಾರೆ.

ಜೆಇಇ (ಮೇನ್ಸ್) ಪರೀಕ್ಷೆ ಮುಂದೂಡಿಕೆ
ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ಮುಂದೂಡಲು ನಾನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯ ಮಹಾನಿರ್ದೇಶಕರಿಗೆ ಸಲಹೆ ನೀಡಿರುವೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಅವರ ಶೈಕ್ಷಣಿಕ ಜೀವನ ನನ್ನ ಪ್ರಮುಖ ಕಾಳಜಿಯಾಗಿವೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಟ್ವೀಟ್ ಮಾಡಿದ್ದಾರೆ.
ಪರೀಕ್ಷೆ ಮುಂದೂಡಿ ಆದೇಶ ಹೊರಡಿಸಿರುವ ಎನ್‌ಟಿಎ, ಪರಿಷ್ಕೃತ ದಿನಾಂಕಗಳನ್ನು ಕನಿಷ್ಠ 15 ದಿನಗಳ ಮೊದಲು ಪ್ರಕಟಿಸಲಾಗುವುದು ಎಂದು ತಿಳಿಸಿದೆ.