ಕರ್ನಾಟಕ

karnataka

ETV Bharat / bharat

ಶೋಪಿಯಾನ್ ಎನ್‌ಕೌಂಟರ್: ಜೆಇಎಂ ಉಗ್ರನ ಹತ್ಯೆ - ಶೋಪಿಯಾನ್ ಎನ್‌ಕೌಂಟರ್

ಇಂದು ಮುಂಜಾನೆ ಶೋಪಿಯಾನ್ ಜಿಲ್ಲೆಯ ಕಪ್ರಾನ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

Shopian Encounter
ಶೋಪಿಯಾನ್ ಎನ್‌ಕೌಂಟರ್

By

Published : Nov 11, 2022, 8:40 AM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಪ್ರಾನ್ ಪ್ರದೇಶದಲ್ಲಿ ಇಂದು (ಶುಕ್ರವಾರ) ಮುಂಜಾನೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ. ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಗೆ ಸೇರಿದ ಕಮ್ರಾನ್ ಭಾಯ್ ಅಲಿಯಾಸ್ ಹನೀಸ್ ಎಂಬ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಕಾಶ್ಮೀರದ ಎಡಿಜಿಪಿ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ವರದಿಗಳ ಪ್ರಕಾರ, ಕಪ್ರಾನ್ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದ ಸೇನೆಯ 34 ರಾಷ್ಟ್ರೀಯ ರೈಫಲ್ಸ್ ತಂಡ ಮತ್ತು ಸ್ಥಳೀಯ ಪೊಲೀಸರು ಬೆಳಗ್ಗೆ ಈ ಪ್ರದೇಶವನ್ನು ಸುತ್ತುವರೆದು ಶೋಧಿಸಿದ್ದಾರೆ. ಈ ನಡುವೆ ವಸತಿ ಗೃಹದಲ್ಲಿದ್ದ ಉಗ್ರರು, ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು.

ಹೆಚ್ಚಿನ ಶೋಧ ನಡೆಯುತ್ತಿರುವುದರಿಂದ ಸ್ಥಳೀಯ ಪೊಲೀಸ್ ಸಿಬ್ಬಂದಿ ಮತ್ತು ಭದ್ರತಾ ಪಡೆಗಳು ಸ್ಥಳದಲ್ಲಿದ್ದಾರೆ. ಮತ್ತಷ್ಟು ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಕಾಶ್ಮೀರದ ಅರಣ್ಯ ಪ್ರದೇಶದಲ್ಲಿ ಮೂವರು ಉಗ್ರರ ಎನ್‌ಕೌಂಟರ್ ಮಾಡಿದ ಸೇನೆ

ABOUT THE AUTHOR

...view details