ಹಜಾರಿಬಾಗ್ (ಜಾರ್ಖಂಡ್): ದಲಿತ ಯುವತಿಯೊಂದಿಗೆ ಅನುಚಿತ ವರ್ತನೆ ಬಗ್ಗೆ ಪ್ರಶ್ನೆ ಮಾಡಿದ ಕಾರಣಕ್ಕೆ ಮತ್ತೊಬ್ಬ ದಲಿತನ ವ್ಯಕ್ತಿಯನ್ನು ಕೊಲೆ ಮಾಡಿ ಘಟನೆ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ತಡರಾತ್ರಿ ವಿದ್ಯುತ್ ಕಂಬಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಈ ದಲಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಇಲ್ಲಿನ ಕೆರೆದಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಪಚಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸೀತಾನ್ ಭುಯಿಯಾನ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಗ್ರಾಮದ ಕೆಲವು ದುಷ್ಕರ್ಮಿಗಳೇ ಈ ಕೊಲೆ ಮಾಡಿದ್ದಾರೆ ಎಂದು ಕುಟುಂಬ ಸದಸ್ಯ ಅನಿಲ್ ಕುಮಾರ್ ಭುಯಿಯಾನ್ ಆರೋಪಿಸಿದ್ದಾರೆ.
ಇದನ್ನೂ ಓದಿ:ದಲಿತ ಬಾಲಕ ದೇವರನ್ನು ಮುಟ್ಟಿದ ಆರೋಪ: ಮೇಲ್ಜಾತಿಯ ಕೆಲವರಿಂದ ಬೆದರಿಕೆ
ಅಸಭ್ಯ ವರ್ತನೆ ಪ್ರಶ್ನಿಸಿದ್ದೇ ತಪ್ಪು: ಅಕ್ಟೋಬರ್ 5ರಂದು ದಲಿತ ಯುವತಿಯೊಂದಿಗೆ ದುಷ್ಕರ್ಮಿಯೊಬ್ಬ ಅಸಭ್ಯವಾಗಿ ವರ್ತಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಆಗ ಗ್ರಾಮದ ದಲಿತ ಕುಟುಂಬಗಳು ಈ ಕೃತ್ಯದ ಬಗ್ಗೆ ಆರೋಪಿಯ ಕುಟುಂಬಕ್ಕೆ ಮಾಹಿತಿ ನೀಡಿದ್ದರು. ಆದರೆ, ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ದಲಿತ ಕುಟುಂಬಗಳ ವಿರುದ್ಧ ಆರೋಪಿಯ ಕುಟುಂಬಸ್ಥರೇ ಪೊಲೀಸ್ ಠಾಣೆಯಲ್ಲಿ ನೀಡಿದ್ದಾರೆ.
ಈ ವಿಷಯ ತಿಳಿದ ದಲಿತ ಕುಟುಂಬದವರು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೊಲೀಸ್ ಠಾಣೆಗೆ ಪ್ರತಿದೂರು ನೀಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ಕುಟುಂಸ್ಥರು ಸೀತಾನ್ ಭುಯಿಯಾನ್ ಅವರನ್ನು ಕೊಲೆ ಮಾಡಿದ ನಂತರ ವಿದ್ಯುತ್ ಕಂಬಕ್ಕೆ ನೇಣು ಹಾಕಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಕೇರಳ ನರಬಲಿ ಕೇಸ್: ಶವ ತುಂಡರಿಸಿ ಬೇಯಿಸಿ ತಿಂದರು.. ಸ್ಫೋಟಕ ಮಾಹಿತಿ ಬಯಲು
ಈ ಘಟನೆ ಸಂಬಂಧ 11 ಜನರ ವಿರುದ್ಧ ಐಪಿಸಿ ಸೆಕ್ಷನ್ 302 ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಕೆರೆದಾರಿ ಪೊಲೀಸ್ ಠಾಣೆಯ ಪ್ರಭಾರಿ ತಿಳಿಸಿದ್ದಾರೆ. ಇತ್ತ, ದಲಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ವಿರುದ್ಧ ಬಿಜೆಪಿ ಟೀಕೆ: ಜಾರ್ಖಂಡ್‌ನಲ್ಲಿ ಅಪರಾಧಿಗಳ ನೈತಿಕ ಪೊಲೀಸ್ಗಿರಿ ಹೇಗೆ ನೋಡಿ. ದಲಿತ ವ್ಯಕ್ತಿ ಸೀತಾನ್ ಭೂಯಾನ್ ಅವರನ್ನು ಮನೆಯಿಂದ ಅಪಹರಿಸಿ ಹತ್ಯೆ ಮಾಡಲಾಗಿದೆ. ಅಲ್ಲದೇ, ಮೃತದೇಹವನ್ನು ವಿದ್ಯುತ್ ಕಂಬಕ್ಕೆ ನೇಣು ಹಾಕಲಾಗಿದೆ. ಸೀತಾನ್ ಕುಟುಂಬವು ಜೀವ ಬೆದರಿಕೆ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಆದಿವಾಸಿಗಳು ಮತ್ತು ದಲಿತರ ಹಿತೈಷಿ ಎಂದು ಬಣ್ಣಿಸಿಕೊಳ್ಳುವ ಈ ಸರ್ಕಾರದ ಅವಧಿಯಲ್ಲಿ ಎಷ್ಟು ಆದಿವಾಸಿಗಳು ಮತ್ತು ದಲಿತರು ಶೋಷಣೆಗೆ ಒಳಗಾಗಿದ್ದಾರೆ ಎಂಬುದು ಇಂದು ಯಾರಿಂದಲೂ ಮರೆಯಾಗಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಮಂಗಳೂರು: ಗುಂಡು ಹಾರಿಸಿಕೊಂಡು ಪಿಎಸ್ಐ ಆತ್ಮಹತ್ಯೆ ಯತ್ನ