ರಾಂಚಿ(ಜಾರ್ಖಂಡ್): ಜಾರ್ಖಂಡ್ನಲ್ಲಿ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉಲ್ಭಣಗೊಂಡಿದ್ದು, ಮೈತ್ರಿ ಸರ್ಕಾರದ ಶಾಸಕರು ಛತ್ತೀಸ್ಗಢ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಶಾಸಕ ಸ್ಥಾನ ರದ್ಧುಗೊಳಿಸಬೇಕೆಂದು ಬಿಜೆಪಿ ಆಗ್ರಹಿಸಿರುವ ಬೆನ್ನಲ್ಲೇ ರಾಜಕೀಯ ಬಿಕ್ಕಟ್ಟು ಉಂಟಾಗಿದೆ.
ರಾಯಪುರದ ಮೇಘೇರ್ ರೆಸಾರ್ಟ್ನಲ್ಲಿ ಶಾಸಕರನ್ನು ಇರಿಸಲಾಗಿದೆ. ಆಡಳಿತ ಪಕ್ಷದ ಶಾಸಕರ ಖರೀದಿಗೆ ಬಿಜೆಪಿ ಮುಂದಾಗಿದೆ ಎಂಬ ಆರೋಪ ಕೇಳಿ ಬಂದಿದ್ದು ಯುಪಿಎ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ನಿವಾಸದಿಂದ ಎರಡು ಬಸ್ಸು ವಿಮಾಣ ನಿಲ್ದಾಣದತ್ತ ಪ್ರಯಾಣಿಸಿದ್ದು, ಅಲ್ಲಿಂದ ರಾಯಪುರ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಶಾಸಕರನ್ನ ಕರೆದುಕೊಂಡು ಹೋಗಲಾಗಿದೆ.