ಅನಂತ್ನಾಗ(ಜಮ್ಮು-ಕಾಶ್ಮೀರ): ಕಣಿವೆ ನಾಡು ಜಮ್ಮು-ಕಾಶ್ಮೀರದ ಅನಂತ್ನಾಗ ಜಿಲ್ಲೆಯ ಶಿತಿಪೋರಾದ ಬಿಜ್ಬೇರಾ ಎಂಬಲ್ಲಿ ಎನ್ಕೌಂಟರ್ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದುಕೊಳ್ಳುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಕಳೆದ ಕೆಲ ವಾರಗಳಿಂದ ನಿರಂತರವಾಗಿ ಗುಂಡಿನ ದಾಳಿ ನಡೆಯುತ್ತಲೇ ಇದೆ. ಕಳೆದ ಮೂರು ದಿನಗಳ ಹಿಂದೆ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಸಮೀಪದ ನಾಜಿಭಟ್ ಪ್ರದೇಶದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮೂವರು ಉಗ್ರರ ಹತ್ಯೆ ಮಾಡುವಲ್ಲಿ ಸೇನೆ ಯಶಸ್ವಿಯಾಗಿತ್ತು.