ಶ್ರೀನಗರ:ಜಮ್ಮು-ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಬಂಡಿಪೋರಾ ಜಿಲ್ಲೆಯಲ್ಲಿ ಭಯೋತ್ಪಾದಕ ಸಂಘಟನೆಯ ಸಹಚರನನ್ನು ಬಂಧಿಸಿದ್ದಾರೆ. ಈತನಿಂದ ಒಂದು ಗ್ರೆನೇಡ್ ಮತ್ತು 50 ಲೈವ್ ಎಕೆ ಸಿರೀಸ್ ರೌಂಡ್ಗಳು ಸೇರಿದಂತೆ ಅನೇಕ ನಿಷೇಧಿತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನೆ-ಪೊಲೀಸರ ಜಂಟಿ ಕಾರ್ಯಾಚರಣೆ: ಲಷ್ಕರ್ ಸಂಘಟನೆಯ ಸಹಚರನ ಬಂಧನ - ಭಯೋತ್ಪಾದಕ ಇರ್ಷಾದ್ ಅಹ್ಮದ್ ಮಿರ್ ಬಂಧನ
ಸೇನೆ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಡಿಪೋರಾ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ ಸಂಘಟನೆಯ ಸಹಚರನನ್ನು ಬಂಧಿಸಿದ್ದಾರೆ.
ಇರ್ಷಾದ್ ಅಹ್ಮದ್ ಮಿರ್
ಬಂಡಿಪೋರಾದಲ್ಲಿ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆ ಮಾಹಿತಿ ಪಡೆದ ಭದ್ರತಾ ಪಡೆ ಮತ್ತು ಪೊಲೀಸರು ಪುತುಶೈ ಪ್ರದೇಶದಲ್ಲಿ ವಿಶೇಷ ಜಂಟಿ ತಪಾಸಣಾ ಕೇಂದ್ರವನ್ನು ಸ್ಥಾಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಸಿಬ್ಬಂದಿ ಕಾರ್ಯಾಚರಣೆ ವೇಳೆ ಒನಗಂ ನಿವಾಸಿ ಇರ್ಷಾದ್ ಅಹ್ಮದ್ ಮಿರ್ ಎಂಬ ಅನುಮಾನಾಸ್ಪದ ವ್ಯಕ್ತಿಯನ್ನು ಬಂಧಿಸಲಾಗಿದೆ. ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ, ಆತ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾ ಸಹಚರನಾಗಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ.