ಕರ್ನಾಟಕ

karnataka

ETV Bharat / bharat

ಜೆಎನ್‌ಯು ದೇಶದ್ರೋಹ ಪ್ರಕರಣ: ಕನ್ಹಯ್ಯ ಕುಮಾರ್ ಸೇರಿ 9 ಜನರಿಗೆ ಸಮನ್ಸ್​ - ಜೆಎನ್‌ಯುಎಸ್‌ಯುನ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್

ಕನ್ಹಯ್ಯ ಕುಮಾರ್ ಮತ್ತು ಜೆಎನ್‌ಯು ಮಾಜಿ ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಸೇರಿದಂತೆ ಇತರರು ಜೆಎನ್​ಯು ಕ್ಯಾಂಪಸ್​ನಲ್ಲಿ 2016 ರಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ ಘಟನೆ ವಿರುದ್ಧ ಅವರ ಮೇಲೆ ಕೇಸ್​ ದಾಖಲಾಗಿತ್ತು.

court
court

By

Published : Feb 16, 2021, 1:24 PM IST

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು)ದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಹಾಗೂ ಇತರ ಒಂಬತ್ತು ಜನರ ವಿರುದ್ಧ ದೆಹಲಿ ಪೊಲೀಸರು ದೇಶದ್ರೋಹ ಪ್ರಕರಣದಲ್ಲಿ ಸಲ್ಲಿಸಿದ ಚಾರ್ಜ್‌ಶೀಟ್ ಕುರಿತು ದೆಹಲಿ ನ್ಯಾಯಾಲಯ​ ಸಮನ್ಸ್ ನೀಡಿದೆ.

ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಸಿಎಮ್ಎಂ) ಪಂಕಜ್ ಶರ್ಮಾ ಅವರು ಸೋಮವಾರ ಅಂತಿಮ ವರದಿಯನ್ನು ಪಡೆದುಕೊಂಡಿದ್ದಾರೆ. ದೆಹಲಿ ಪೊಲೀಸರು ಈ ಪ್ರಕರಣದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಅಗತ್ಯವಾದ ನಿರ್ಬಂಧಗಳನ್ನು ಪಡೆದಿದ್ದಾರೆ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.

ಕನ್ಹಯ್ಯ ಕುಮಾರ್ ಮತ್ತು ಜೆಎನ್‌ಯು ಮಾಜಿ ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ ಸೇರಿದಂತೆ ಇತರರು ಜೆಎನ್​ಯು ಕ್ಯಾಂಪಸ್​ನಲ್ಲಿ 2016 ರಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಈ ಘಟನೆ ವಿರುದ್ಧ ಅವರ ಮೇಲೆ ಕೇಸ್​ ದಾಖಲಾಗಿತ್ತು.

ABOUT THE AUTHOR

...view details