ಕರ್ನಾಟಕ

karnataka

ETV Bharat / bharat

ಬ್ಯಾಂಕ್​ ಆಫ್​ ಬರೋಡಾದಲ್ಲಿ ಉದ್ಯೋಗಾವಕಾಶ; 157 ಹುದ್ದೆಗೆ ಅರ್ಜಿ ಆಹ್ವಾನ - ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ

ಆಸಕ್ತ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ, ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

Job opportunity in Bank of Baroda; Application invited for 157 posts
Job opportunity in Bank of Baroda; Application invited for 157 posts

By

Published : May 8, 2023, 4:56 PM IST

ಬ್ಯಾಂಕಿಂಗ್​ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಬ್ಯಾಂಕ್​ ಆಫ್​ ಬರೋಡ ಸಿಹಿ ಸುದ್ದಿ ನೀಡಿದೆ. ಬ್ಯಾಂಕ್​ ಆಫ್​ ಬರೋಡಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೆಡಿಟ್​ ಅನಾಲಿಸ್ಟ್​, ರಿಲೇಷನ್​ಶಿಪ್​ ಮ್ಯಾನೇಜರ್​ ಸೇರಿದಂತೆ ಒಟ್ಟು 157 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಭಾರತಾದ್ಯಂತ ಈ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ, ನೇಮಕಾತಿ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

ಹುದ್ದೆ ವಿವರ: ರಿಲೇಷನ್​ಶಿಪ್​​ ಮ್ಯಾನೇಜರ್​​, ಕ್ರೆಡಿಟ್​ ಅನಾಲಿಸ್ಟ್​​, ಫೊರೆಕ್ಸ್​ ಅಕ್ವಾಸಿಷನ್​ ಅಂಡ್​ ರಿಲೇಷನ್​ಶಿಪ್​ ಮ್ಯಾನೇಜರ್ ನ ಸ್ಕೇಲ್​ 2 ಮತ್ತು 3 ಹುದ್ದೆ ಸೇರಿದಂತೆ ಒಟ್ಟು 157 ಹುದ್ದೆಗಳ ನೇಮಕಾತಿಗೆ ಮುಂದಾಗಲಾಗಿದೆ.

ಅಧಿಕೃತ ಅಧಿಸೂಚನೆ

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ, ಸ್ನಾತಕೋತ್ತರ ಪದವಿ, ಸಿಎ, ಸಿಎಂಎ, ಸಿಎಸ್​, ಸಿಎಫ್​ಎ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಕನಿಷ್ಟ 24ರಿಂದ ಗರಿಷ್ಠ 42 ವರ್ಷದ ವಯೋಮಾನ ಹೊಂದಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಇನ್ನು ಈ ಹುದ್ದೆಗಳಿಗೆ ಹುದ್ದೆ ಅನುಸಾರ 48,170 ರೂ. ಯಿಂದ 89,890 ರೂ. ವರೆಗೆ ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ ವಿಧಾನ: ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ, ಗುಂಪು ಚರ್ಚೆ, ಮನೋಬಲ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಮುನ್ನ ಅಧಿಕೃತ ಅಧಿಸೂಚನೆಯನ್ನು ಸರಿಯಾಗಿ ಪರಿಶೀಲನೆ ಮಾಡತಕ್ಕದ್ದು. ಅರ್ಜಿ ಸಲ್ಲಿಕೆಗೆ ಮುನ್ನ ಅಗತ್ಯ ವಿವರ ಮತ್ತು ದಾಖಲಾತಿಗಳನ್ನು ಸರಿಯಾಗಿಟ್ಟುಕೊಳ್ಳಿ. ಬಳಿಕ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ಅಭ್ಯರ್ಥಿಗಳು ಏಪ್ರಿಲ್​ 27 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 17ರಂದು ಕಡೆಯ ದಿನಾಂಕವಾಗಿದೆ. ಈ ದಿನವೇ ಅರ್ಜಿ ಶುಲ್ಕ ಪಾವತಿಗೂ ಕಡೆಯ ದಿನವಾಗಿದೆ.

ಈ ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿ ಮತ್ತು ವಿವರ ಸೇರಿದಂತೆ ಅಧಿಕೃತ ಅಧಿಸೂಚನೆ ವೀಕ್ಷಣೆಗೆ bankofbaroda.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: ಉದ್ಯೋಗ ಪಡೆಯಲು ಡಿಗ್ರಿಗಳಿಗಿಂತ ಕೌಶಲಗಳು ಮುಖ್ಯ: ವೃತ್ತಿಪರರ ಪ್ರತಿಪಾದನೆ

ABOUT THE AUTHOR

...view details