ಭಾರತೀಯ ನೌಕಾ ಪಡೆಯಲ್ಲಿ ಕಾರ್ಯನಿರ್ವಹಿಸಲು ಇಚ್ಛೆ ಹೊಂದಿರುವ ಪದವೀಧರ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಒದಗಿ ಬಂದಿದೆ. ನೌಕಾ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಸಿಬ್ಬಂದಿ ನೇಮಕಾತಿ ಆಯೋಗ ಅಧಿಸೂಚನೆ ಪ್ರಕಟಿಸಿದೆ.
ಹುದ್ದೆಗಳ ವಿವರ: ಎಸ್ಎಸ್ಸಿ ಎಕ್ಸಿಕ್ಯೂಟಿವ್ (ಐಟಿ) ಹುದ್ದೆಗೆ ಅರ್ಜಿ ಅಹ್ವಾನ.
ವಿದ್ಯಾಭ್ಯಾಸ: ಅಭ್ಯರ್ಥಿಗಳು ಐಟಿ, ಸಾಫ್ಟ್ವೇರ್ ಸಿಸ್ಟಂ, ಸೈಬರ್ ಸೆಕ್ಯೂರಿಟಿ, ಸಿಸ್ಟಂ ಆಡ್ಮಿನಿಸ್ಟ್ರೇಷನ್ ಮತ್ತು ನೆಟ್ವರ್ಕಿಂಗ್ ಇಂಜಿನಿಯರಿಂಗ್ ಪದವಿಯಲ್ಲಿ ಶೇ 60ರಷ್ಟು ಅಂಕದೊಂದಿಗೆ ಉತ್ತೀರ್ಣರಾಗಿರಬೇಕು. ಅಂತಿಮ ವರ್ಷದ ಬಿಇ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಂಎಸ್ಸಿ, ಎಂಟೆಕ್, ಎಂಸಿಎ ಪದವಿ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.
ವಯೋಮಿತಿ:ಅಭ್ಯರ್ಥಿಗಳು ಜೂನ್ 2, 1999 ರಿಂದ ಜುಲೈ 1, 2004ರೊಳಗೆ ಜನಿಸಿರಬೇಕು.
ಹುದ್ದೆ ಆಯ್ಕೆ: ಅಭ್ಯರ್ಥಿಗಳನ್ನು ವಿದ್ಯಾರ್ಹತೆಯ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾವುದೇ ಅರ್ಜಿ ಶುಲ್ಕ ನಿಗದಿಸಲಾಗಿಲ್ಲ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಓದಿ ತಮ್ಮ ಸಂಪೂರ್ಣ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಇಮೇಲ್ ವಿಳಾಸ, ಮೊಬೈಲ್ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಬೇಕಿದೆ.
ಎನ್ಸಿಸಿ ಸಿ ಸರ್ಟಿಫೀಕೆಟ್ ಹೊಂದಿರುವ ಅಭ್ಯರ್ಥಿಗಳಿಗೆ ಶೇ 5 ರಷ್ಟು ಮೀಸಲಾತಿ ನೀಡಲಾಗಿದೆ. ಆಗಸ್ಟ್ 8 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 20 ಆಗಿದೆ.
ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಅಗತ್ಯ ವಿವರಗಳಿಗೆ ಈjoinindiannavy.gov.in ಜಾಲತಾಣಕ್ಕೆ ಭೇಟಿ ನೀಡಿ.
ಜೆಇ ಹುದ್ದೆಗೆ ಅರ್ಜಿ ಆಹ್ವಾನಿಸಿದ ಎಸ್ಎಸ್ಸಿ:ಜ್ಯೂನಿಯರ್ ಇಂಜಿನಿಯರ್ ನೇಮಕಾತಿಗೆ ಅಧಿಸೂಚನೆ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕಡೆಗೂ ಸಿಬ್ಬಂದಿ ನೇಮಕಾತಿ ಆಯೋಗ (SSC) ಸಿಹಿ ಸುದ್ದಿ ನೀಡಿದೆ. ಆಯೋಗವು 1,324 ಜೆಇ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಿವಿಲ್ ಮತ್ತು ಮೆಕ್ಯಾನಿಕಲ್ ಹಾಗೂ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಪದವೀಧರರು ಅರ್ಜಿ ಸಲ್ಲಿಸಬಹುದು. ಭಾರತಾದ್ಯಂತ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 17 ಆಗಿದೆ.
ಬಿಇ ಮತ್ತು ಡಿಪ್ಲೊಮಾ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಈ ಹುದ್ದೆ ಆಯ್ಕೆ ನಡೆಯಲಿದ್ದು, ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 32 ವರ್ಷ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ssc.nic.in ಜಾಲತಾಣಕ್ಕೆ ಭೇಟಿ ನೀಡಬಹುದು.
ಇದನ್ನೂ ಓದಿ: Job Alert: ಕರ್ನಾಟಕ ಸೈನಿಕ ಕಲ್ಯಾಣ ಇಲಾಖೆಯಿಂದ ನೇಮಕಾತಿ.. ಕಲ್ಯಾಣ ಸಂಘಟಕರ ಹುದ್ದೆಗೆ ಅರ್ಜಿ ಆಹ್ವಾನ