ಜೋಧಪುರ:ರಾಜಸ್ಥಾನ ಜೋಧ್ಪುರದ ಮದುವೆ ಮನೆಯಲ್ಲಿ ಎರಡು ದಿನಗಳ ಹಿಂದೆ ನಡೆದ ಸಿಲಿಂಡರ್ ಸ್ಫೋಟದಲ್ಲಿ ವರನ ತಾಯಿ ಸೇರಿದಂತೆ ಸೋಮವಾರ 6 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 18 ಕ್ಕೆ ಏರಿಕೆ ಕಂಡಿದೆ. ದುರ್ಘಟನೆಯಲ್ಲಿ 34 ಮಂದಿ ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಜೋಧಪುರದ ಶೇರ್ಗಢ್‌ನ ಭುಂಗ್ರಾ ಗ್ರಾಮದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. 51 ಜನರಿದ್ದ ಮನೆಯಲ್ಲಿ ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟವಾಗಿತ್ತು. ಘಟನೆಯಲ್ಲಿ 12 ಜನರು ಬೆಂಕಿಗಾಹುತಿಯಾಗಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಮತ್ತೆ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೂ ಐವರ ಸ್ಥಿತಿ ಚಿಂತಾಜನಕವಾಗಿದೆ.