ನವದೆಹಲಿ:ಅಮೆರಿಕ ಮೂಲದ ಜಾಗತಿಕ ಔಷಧ ಕಂಪನಿ ಜಾನ್ಸನ್ & ಜಾನ್ಸನ್ ಸಿಂಗಲ್ - ಡೋಸ್ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ಭಾರತ ಅನುಮೋದನೆ ನೀಡಿದೆ. ಈ ವಿಚಾರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.
"ಭಾರತ ತನ್ನ ಲಸಿಕೆಯ ಕಣಜವನ್ನು ವಿಸ್ತರಿಸುತ್ತಿದೆ. ಭಾರತದಲ್ಲಿ ಜಾನ್ಸನ್ & ಜಾನ್ಸನ್ ಕಂಪನಿಯ ಸಿಂಗಲ್ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ. ಈಗ ದೇಶದಲ್ಲಿ ತುರ್ತು ಬಳಕೆಗೆ 5 ಕೊರೊನಾ ಲಸಿಕೆಗಳಿವೆ. ಇದು ನಮ್ಮ ರಾಷ್ಟ್ರದ ಕೋವಿಡ್ ವಿರುದ್ಧದ ಸಾಮೂಹಿಕ ಹೋರಾಟವನ್ನು ಮತ್ತಷ್ಟು ಹೆಚ್ಚಿಸುತ್ತದೆ" ಎಂದು ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.