ಜಮ್ಮು ಮತ್ತು ಕಾಶ್ಮೀರ:ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಉಪವಿಭಾಗದ ಝಂಗರ್ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಭದ್ರತಾ ಪಡೆಗಳ ಜಂಟಿ ತಂಡ ಶುಕ್ರವಾರ ಬೆಳಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ 8.96 ಕಿಲೋಗ್ರಾಂಗಳಷ್ಟು ಮಾದಕ ವಸ್ತುವನ್ನು ವಶಪಡಿಸಿಕೊಂಡಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಮತ್ತು ಬಿಎಸ್‌ಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಜೌರಿ ಅಮೃತಪಾಲ್ ಸಿಂಗ್ ಹೇಳಿದ್ದಾರೆ.
ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ ಮತ್ತು ಬಿಎಸ್‌ಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಗುಪ್ತಚರ ಮಾಹಿತಿಯ ಆಧಾರದ ಮೇಲೆ ನೌಶೇರಾ ವಲಯದ ಜಂಗರ್‌ನ ಎಲ್‌ಒಸಿ ಪ್ರದೇಶದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಯಿತು. ಆ ಪ್ರದೇಶದ ಸೇನಾ ಘಟನ ಕಾಗೂ ಪೊಲೀಸರು ಹಾಗೂ ಬಿಎಸ್‌ಎಫ್ ಈ ಕಾರ್ಯಾಚರಣೆ ಕೈಗೊಂಡಿತ್ತು. ಕಾರ್ಯಾಚರಣೆ ವೇಳೆ ಆ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರಿದ ತಂಡ ವ್ಯಾಪಕ ಶೋಧ ನಡೆಸಿದೆ ಎಂದು ರಾಜೌರಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಮೃತಪಾಲ್ ಸಿಂಗ್ (ಐಪಿಎಸ್) ಹೇಳಿದ್ದಾರೆ.
ತಂಡದ ಕಾರ್ಯಾಚರಣೆ ವೇಳೆ 8 ಕೆಜಿ 960 ಗ್ರಾಂ ತೂಕದ ಐದು ಪ್ಯಾಕೆಟ್ ಮಾದಕ ದ್ರವ್ಯ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ನೌಶೇರಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ 171/2023 ಯು/ಎಸ್‌ಎಸ್ 8/21/22 ಎನ್‌ಡಿಪಿಎಸ್ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಎಸ್‌ಎಸ್‌ಪಿ ರಾಜೌರಿ ತಿಳಿಸಿದ್ದಾರೆ.