ಕರ್ನಾಟಕ

karnataka

ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತೆಲಂಗಾಣ ವೈದ್ಯರ ಪ್ರತಿಭಟನೆ

By

Published : May 27, 2021, 8:44 AM IST

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತೆಲಂಗಾಣ ಜೂನಿಯರ್ ಡಾಕ್ಟರ್ಸ್ ಅಸೋಸಿಯೇಶನ್ (ಟಿಜೆಯುಡಿಎ) ಪ್ರತಿಭಟನೆ ನಡೆಸಿದೆ.

KCR
KCR

ತೆಲಂಗಾಣ: ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸಲಿಲ್ಲವೆಂದು ಆಕ್ರೋಶಗೊಂಡ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತೆಲಂಗಾಣ ಜೂನಿಯರ್ ಡಾಕ್ಟರ್ಸ್ ಅಸೋಸಿಯೇಶನ್ (ಟಿಜೆಯುಡಿಎ) ಮೇ 26 ರಿಂದ ಸೇವೆಗಳನ್ನು ಬಹಿಷ್ಕರಿಸುವುದಾಗಿ ತಿಳಿಸಿತ್ತು. ಈ ಬಗ್ಗೆ ಮಾತನಾಡಿದ ಕಿರಿಯ ವೈದ್ಯರ ಸಂಘದ ಪ್ರತಿನಿಧಿಯೊಬ್ಬರು, ತುರ್ತು ಮತ್ತು ಐಸಿಯು ಕರ್ತವ್ಯಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಸ್ಥಗಿತಗಿಗೊಳಿಸಿದ್ದೇವೆ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿದ ಸಿಎಂ ಕೆ.ಚಂದ್ರಶೇಖರ ರಾವ್​, ವೈದ್ಯರು ತಕ್ಷಣವೇ ಕರ್ತವ್ಯಕ್ಕೆ ಹಾಜರಾಗಿ. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಯಾವುದೇ ಆಕ್ಷೇಪವಿಲ್ಲ. ಆದರೆ ಸಾಂಕ್ರಾಮಿಕದ ಸಂದರ್ಭದಲ್ಲಿ ಈ ಮುಷ್ಕರವನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವೈದ್ಯರ ಬಗ್ಗೆ ಸರ್ಕಾರ ಯಾವತ್ತೂ ತಾರತಮ್ಯ ಮಾಡಿಲ್ಲ ಮತ್ತು ಅವರ ಸಮಸ್ಯೆಗಳೆಲ್ಲವೂ ಈ ಹಿಂದೆ ಬಗೆಹರಿಸಿದ್ದೇವೆ. ಅವರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧವಾಗಿದೆ ಎಂದು ಕೆಸಿಆರ್‌ ಹೇಳಿದರು.

ಹಿರಿಯ ವೈದ್ಯರಿಗೆ ನೀಡುವ ಗೌರವ ಧನವನ್ನು ಶೇ.15ರಷ್ಟು ಹೆಚ್ಚಿಸಲು ಮತ್ತು ಕೋವಿಡ್ -19 ಕರ್ತವ್ಯದಲ್ಲಿ ನಿರತರಾಗಿರುವ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೂಡ ಹಿರಿಯ ವೈದ್ಯರ ಗೌರವ ಧನವನ್ನು ನೀಡಲು ಸಿಎಂ ನಿರ್ಧರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details