ಹೈದರಾಬಾದ್,ತೆಲಂಗಾಣ: ಎನ್ ವಿ ರಮಣ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು. ಇಂದು ಅವರು ತಮ್ಮ ಸ್ಥಾನದಿಂದ ನಿವೃತ್ತಿಯಾಗಲಿದ್ದಾರೆ. ಇವತ್ತು ಇತಿಹಾಸದಲ್ಲೇ ಮೊದಲ ಬಾರಿಗೆ ಸುಪ್ರೀಂಕೋರ್ಟ್ ಕಲಾಪದ ನೇರ ಪ್ರಸಾರವನ್ನು ಮಾಡಲಾಯಿತು. ಅಂದ ಹಾಗೆ ಸಿಜೆಐ ಎನ್. ವಿ. ರಮಣ ಅವರು ತಮ್ಮ 16 ತಿಂಗಳ ಅಧಿಕಾರವಧಿಯಲ್ಲಿ ನ್ಯಾಯಾಂಗದಲ್ಲಿ ಹಲವು ಸುಧಾರಣೆಗಳಿಗೆ ಶ್ರೀಕಾರ ಹಾಕಿದ್ದಾರೆ.
ಭವಿಷ್ಯದ ಸಿಜೆಐಗಳಿಗೆ ಮಾರ್ಗದರ್ಶಿ ಆದ ನ್ಯಾಯಮೂರ್ತಿ ರಮಣ: ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸಿಜೆಐ ಆಗಿ 16 ತಿಂಗಳ ಅಧಿಕಾರಾವಧಿಯಲ್ಲಿ ಅನೇಕ ಪ್ರಮುಖ ಸುಧಾರಣೆಗಳನ್ನು ಪ್ರಾರಂಭಿಸಿದರು. ಜನರ ನಿರೀಕ್ಷೆಗಳನ್ನು ಪೂರೈಸಲು ಅವಿರತವಾಗಿ ಶ್ರಮಿಸಿದ್ದಾರೆ. ಕಾನೂನು ವ್ಯವಸ್ಥೆಯಲ್ಲಿ ಬಹಳ ದಿನಗಳಿಂದ ಕಾಡುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟೇ ಅಲ್ಲ ಅವುಗಳನ್ನು ಪರಿಹರಿಸಲು ಅಗತ್ಯವಾದ ಮಾರ್ಗಗಳನ್ನು ಸಹ ಸೂಚಿಸಿದ್ದಾರೆ. ಅವರು ತಮ್ಮ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವ ಮೂಲಕ ಭವಿಷ್ಯದ ಸಿಜೆಐಗಳಿಗೆ ಮಾರ್ಗದರ್ಶಿ ಸಹ ಆಗಿದ್ದಾರೆ.
9 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕ: ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಸೌಲಭ್ಯಗಳ ಕೊರತೆ ಇದೆ. ಆ ಹಿನ್ನೆಲೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಬಗೆಹರಿಯದ ಹಲವು ಸಮಸ್ಯೆಗಳ ಪರಿಹಾರಕ್ಕೆ ನ್ಯಾಯಮೂರ್ತಿ ಎನ್.ವಿ.ರಮಣ ಆದ್ಯತೆ ನೀಡಿದರು. ನ್ಯಾಯಾಧೀಶರ ನೇಮಕವನ್ನು ತೀವ್ರವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಜನರಿಗೆ ನ್ಯಾಯವನ್ನು ತ್ವರಿತವಾಗಿ ತಲುಪಿಸಲು ಸಾಧ್ಯವಾಗಿದೆ. ನ್ಯಾಯಾಂಗವನ್ನು ಕಾಡುತ್ತಿರುವ ಸಮಸ್ಯೆಗಳನ್ನು ಕಾಲಕಾಲಕ್ಕೆ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ.
ಅವುಗಳನ್ನು ಪರಿಹರಿಸಲು ಅಗತ್ಯವಾದ ಮಾರ್ಗಗಳನ್ನು ಸಹ ಸೂಚಿಸಿದ್ದಾರೆ. ನ್ಯಾಯಾಂಗ ವ್ಯವಸ್ಥೆಯಲ್ಲಿನ ಖಾಲಿ ಹುದ್ದೆಗಳು ಮತ್ತು ಮೂಲಸೌಕರ್ಯಗಳ ಸೃಷ್ಟಿಯನ್ನು ತ್ವರಿತವಾಗಿ ತೆಗೆದುಕೊಳ್ಳದಿದ್ದರೆ ಸಂವಿಧಾನದಲ್ಲಿ ಉಲ್ಲೇಖಿಸಲಾದ ಎಲ್ಲ ಜನರಿಗೆ ನ್ಯಾಯವು ಪುರಾಣವಾಗಿ ಉಳಿಯುತ್ತದೆ ಎಂದು ನ್ಯಾಯಮೂರ್ತಿ ಎನ್‌ವಿ ರಮಣ ಬಲವಾಗಿ ನಂಬಿದ್ದರು.
ಹೀಗಾಗಿಯೇ ಕಳೆದ ಆಗಸ್ಟ್‌ನಲ್ಲಿ ಒಂದೇ ಬಾರಿಗೆ 9 ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇಮಕ ನಡೆದಿದೆ. ಅವರಲ್ಲಿ ಮೂವರು ಮಹಿಳೆಯರು ಆಯ್ಕೆಯಾಗಿದ್ದು ವಿಶೇಷವಾಗಿತ್ತು. ಈ ನೇಮಕಾತಿಯೊಂದಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ನಾಲ್ಕಕ್ಕೆ ತಲುಪಿತು. ಇದು ಸರ್ವೋಚ್ಚ ನ್ಯಾಯಾಲಯದ ಇತಿಹಾಸದಲ್ಲಿ ಅತ್ಯಧಿಕವಾಗಿದೆ.
ಹೈಕೋರ್ಟ್‌ಗಳಿಗೆ ಮಹಿಳಾ ನ್ಯಾಯಾಮೂರ್ತಿಗಳ ನೇಮಕ:ಎಲ್ಲವೂ ಸುಸೂತ್ರವಾಗಿ ನಡೆದರೆ ಅವರಲ್ಲಿ ನ್ಯಾಯಮೂರ್ತಿ ನಾಗರತ್ನ ಅವರು 2027ರಲ್ಲಿ ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ನಂತರ ಮತ್ತಿಬ್ಬರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು. ನ್ಯಾಯಮೂರ್ತಿ ಎನ್‌ವಿ ರಮಣ ಅವರು 12 ತಿಂಗಳ ಕಡಿಮೆ ಅವಧಿಯಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಖಾಲಿಯಾದ 11 ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ.
ದೇಶದ ವಿವಿಧ ಹೈಕೋರ್ಟ್‌ಗಳಿಗೆ 224 ಹೈಕೋರ್ಟ್ ನ್ಯಾಯಮೂರ್ತಿಗಳ ನೇಮಕ ಪೂರ್ಣಗೊಂಡಿದೆ. 15 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ. ಇಲ್ಲಿಯವರೆಗೆ ಹೈಕೋರ್ಟ್‌ಗಳಿಗೆ ನೇಮಕಗೊಂಡಿರುವ ನ್ಯಾಯಮೂರ್ತಿಗಳಲ್ಲಿ ಶೇ.20ರಷ್ಟು ಮಹಿಳೆಯರೇ ಇದ್ದಾರೆ. ಈ ಮಟ್ಟದ ನೇಮಕಾತಿಗಳು ಹಿಂದೆಂದೂ ನಡೆದಿರಲಿಲ್ಲ.
ಹುದ್ದೆಗಳ ಭರ್ತಿಯಲ್ಲಿ ಸಾಮಾಜಿಕ ಸಮತೋಲನ: ನ್ಯಾಯಮೂರ್ತಿ ಎನ್‌ವಿ ರಮಣ ಅವರು ನ್ಯಾಯಾಂಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯಲ್ಲಿ ಸಾಮಾಜಿಕ ಸಮತೋಲನಕ್ಕೆ ಆದ್ಯತೆ ನೀಡಿದರು. ಎಲ್ಲ ಪ್ರದೇಶಗಳು, ಎಲ್ಲ ಸಮುದಾಯಗಳು, ಎಲ್ಲಾ ಧರ್ಮಗಳು, ಮಹಿಳೆಯರು ಮತ್ತು ದುರ್ಬಲ ವರ್ಗದವರಿಗೆ ಪ್ರಾತಿನಿಧ್ಯ ನೀಡಲು ಅವರು ಶ್ರಮಿಸಿದ್ದಾರೆ. ನ್ಯಾಯಾಲಯದ ಪೀಠಗಳು ಸಮಾಜದ ವೈವಿಧ್ಯತೆಯನ್ನು ಪ್ರತಿಬಿಂಬಿಸಬೇಕೆಂದು ಅವರು ಬಯಸುತ್ತಾರೆ.