ನವದೆಹಲಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (ಎನ್‌ಎಎಲ್‌ಎಸ್‌ಎ) ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರನ್ನು ನಾಮನಿರ್ದೇಶನ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶಿಸಿದ್ದಾರೆ.
ಕಾನೂನು ಮತ್ತು ನ್ಯಾಯ ಸಚಿವಾಲಯವು ನವೆಂಬರ್ 25 ರಂದು ಹೊರಡಿಸಿದ ಅಧಿಸೂಚನೆ ಪ್ರಕಾರ "ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯಿದೆ, 1987 ರ ಸೆಕ್ಷನ್ 3ರ ಉಪ-ವಿಭಾಗ (2)ರ ಷರತ್ತು(ಬಿ)ಅಡಿ ನೀಡಲಾದ ಅಧಿಕಾರಗಳನ್ನು ಚಲಾಯಿಸುವಲ್ಲಿ, ರಾಷ್ಟ್ರಪತಿಯವರು ಸಂತಸದಿಂದ ಗೌರವಾನ್ವಿತ ಶ್ರೀ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಾಧೀಶರು, ಭಾರತ ಸರ್ವೋಚ್ಛ ನ್ಯಾಯಾಲಯ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾಗಿ ನಾಮನಿರ್ದೇಶನ ಮಾಡಲಾಗಿದೆ"