ನವದೆಹಲಿ: ಸುಪ್ರೀಂ ಕೋರ್ಟ್ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ನೇಮಕಗೊಂಡಿದ್ದು ಆಗಸ್ಟ್ 27ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನಿವೃತ್ತಿಯಾಗಲಿರುವ ಕಾರಣ ಅವರ ಸ್ಥಾನಕ್ಕೆ ನೂತನ ನ್ಯಾಯಮೂರ್ತಿಗಳನ್ನು ನೇಮಿಸಿ ರಾಷ್ಟ್ರಪತಿ ಭವನ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 26ರಂದು ಮುಖ್ಯ ನ್ಯಾಯಮೂರ್ತಿ ರಮಣ ನಿವೃತ್ತಿಯಾಗುವರು.
ಉದಯ್ ಉಮೇಶ್ ಲಲಿತ್ ಅವರು ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿಗಳಾಗಿದ್ದು, ಕಳೆದ ಒಂದು ವಾರದ ಹಿಂದೆ ಇವರ ಹೆಸರು ಶಿಫಾರಸು ಮಾಡಿ ನ್ಯಾ.ಎನ್.ವಿ.ರಮಣ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದರು.
ಮೂರು ತಿಂಗಳು ಮಾತ್ರ ಅಧಿಕಾರವಧಿ:ಸುಪ್ರೀಂ ಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಲ್ಲಿ ಒಬ್ಬರಾಗಿರುವ ಯು.ಬಿ.ಲಲಿತ್ ನವೆಂಬರ್ 8ರಂದು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಇವರ ಅಧಿಕಾರವಧಿ ಮೂರು ತಿಂಗಳು ಮಾತ್ರ ಇರಲಿದೆ.