ಕರ್ನಾಟಕ

karnataka

ETV Bharat / bharat

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕವೇ ಕಾವೇರಿ ನೀರಿನ ಸಮಸ್ಯೆ ಶುರುವಾಗಿದೆ: ಕೆ ಅಣ್ಣಾಮಲೈ ವಾಗ್ದಾಳಿ - Protest against kaveri water release for tamilnadu

Cauvery water dispute: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆಯೇ ಕಾವೇರಿ ನೀರಿನ ಸಮಸ್ಯೆ ಪ್ರಾರಂಭವಾಗಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ವಾಗ್ದಾಳಿ ನಡೆಸಿದ್ದಾರೆ.

K Annamalai
ಕೆ ಅಣ್ಣಾಮಲೈ

By ETV Bharat Karnataka Team

Published : Aug 23, 2023, 11:01 AM IST

ತಮಿಳುನಾಡು : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ನೀರಿನ ಸಮಸ್ಯೆ ಪ್ರಾರಂಭವಾಗಿದೆ. ಅವರು ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ತಮಿಳುನಾಡಿಗೆ ಒಂದು ಹನಿ ನೀರನ್ನು ಕೊಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ ಬಳಿಕ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿತು" ಎಂದು ವಾಗ್ದಾಳಿ ನಡೆಸಿದರು.

ನೀಟ್ ಪರೀಕ್ಷೆ ಕುರಿತು ಮಾತನಾಡಿದ ಅವರು, "ನೀಟ್ ವಿಷಯದಲ್ಲಿ ಡಿಎಂಕೆ ಪಕ್ಷ ರಾಜಕೀಯ ಮಾಡುತ್ತಿದೆ. ಇದುವರೆಗೆ 18 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಡಿಎಂಕೆ ಪಕ್ಷವೇ ಸಂಪೂರ್ಣ ಹೊಣೆ. ಆದ್ದರಿಂದ ತಮಿಳುನಾಡು ಪೊಲೀಸರು ಎಂಕೆ ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆರ್ ದಾಖಲಿಸಬೇಕೆಂದು ನಾನು ಒತ್ತಾಯಿಸುತ್ತಿದ್ದೇನೆ" ಎಂದರು.

ಇದನ್ನೂ ಓದಿ :ಚಂದ್ರಯಾನ 3 ಯಶಸ್ವಿಯಾಗಲೆಂದು ದೇಶ, ವಿದೇಶಗಳಲ್ಲಿ ಪ್ರಾರ್ಥನೆ : ಹೋಮ, ಹವನ, ಪೂಜೆ ನಡೆಸುತ್ತಿರುವ ಭಕ್ತರು

ಚಂದ್ರಯಾನ 3 ವಿಷನ್​ ಕುರಿತು, "ಭಾರತವು ಅತ್ಯಂತ ಗಣ್ಯ ರಾಷ್ಟ್ರಗಳ ಪಟ್ಟಿಗೆ ಸೇರಲು ಸಿದ್ಧವಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ದಕ್ಷಿಣ ಧ್ರುವದಲ್ಲಿ ರೋವರ್ ಮತ್ತು ಲ್ಯಾಂಡರ್ ಅನ್ನು ಯಶಸ್ವಿಯಾಗಿ ಇಳಿಸಲು ಮುಂದಾಗಿದೆ. ತಾಂತ್ರಿಕವಾಗಿ ದಕ್ಷಿಣ ಧ್ರುವವು ಚಂದ್ರನ ಕಠಿಣ ಭಾಗವಾಗಿದ್ದು, ಇಡೀ ದೇಶವೇ ಈ ಮಹತ್ತರ ಕ್ಷಣವನ್ನು ಕಣ್ತುಂಬಿಕೊಳ್ಳಲು ಎದುರು ನೋಡುತ್ತಿದೆ. ವಿಶೇಷವಾಗಿ, ರಷ್ಯಾ ದೇಶವು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದು, ಕಳೆದ ಎರಡು ದಿನಗಳ ಹಿಂದೆ ತಮ್ಮ ರೇಂಜರ್ ಲ್ಯಾಂಡರ್ ಅನ್ನು ಇಳಿಸುವಲ್ಲಿ ವಿಫಲವಾಗಿದೆ. ಇದೀಗ, ದೇಶವು ಮಹತ್ವದ ಕಾರ್ಯಕ್ಕೆ ಮುಂದಾಗಿದ್ದು, ಭಾರತ ವಿಜ್ಞಾನವು ವಿಶ್ವಕ್ಕೆ ಸಮನಾಗಿದೆ ಎಂದು ಸಾಬೀತುಪಡಿಸಲು ನಾವು ಎದುರು ನೋಡುತ್ತಿದ್ದೇವೆ" ಎಂದು ಹೇಳಿದರು. (ಎಎನ್​ಐ)

ಇದನ್ನೂ ಓದಿ :Senthil Balaji Case: ಸೆಂಥಿಲ್ ಬಾಲಾಜಿ ಬಂಧನಕ್ಕೆ ರಾಜಕೀಯ ಬಣ್ಣ ಬೇಡ, ಇದೊಂದು ಕಾನೂನು ಪ್ರಕ್ರಿಯೆ- ಅಣ್ಣಾಮಲೈ

ಕಾವೇರಿ ನೀರು ಬಿಡುಗಡೆ ವಿರೋಧಿಸಿ ಪ್ರತಿಭಟನೆ :ನಿನ್ನೆ ಕೆಆರ್​ಎಸ್​ ಅಣೆಕಟ್ಟೆಯಿಂದ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಬೆಂಗಳೂರು - ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದವು. 124.80 ಅಡಿ ಗರಿಷ್ಟ ಸಾಮರ್ಥ್ಯದ ಕೆಆರ್​ಎಸ್ ಜಲಾಶಯದಲ್ಲಿ ಇದೀಗ 104 ಅಡಿ ಮಾತ್ರ ನೀರು ಸಂಗ್ರಹವಿದೆ. ಆದರೆ, ಕಳೆದ ಕೆಲ ದಿನಗಳಿಂದ 10 ರಿಂದ 12 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ರೈತರು ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ :ಮಂಡ್ಯ: ಕಾವೇರಿ ನೀರು ಬಿಡುಗಡೆ ವಿರೋಧಿಸಿ ರೈತರಿಂದ ಪ್ರತಿಭಟನೆ, ಹಲವರು ಪೊಲೀಸ್ ವಶಕ್ಕೆ

ABOUT THE AUTHOR

...view details