ಭಿವಾನಿ(ಹರಿಯಾಣ):ಚಲಿಸುತ್ತಿದ್ದ ರೈಲಿನಲ್ಲೇ ಕಬಡ್ಡಿ ಆಟಗಾರ್ತಿ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ರೈಲಿನ ಶೌಚಾಲಯದಲ್ಲಿ ಈ ದುಷ್ಕೃತ್ಯ ಎಸಗಲಾಗಿದ್ದು, ಇದೀಗ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.
ಹರಿಯಾಣದ ದಂಗರ್ ಗ್ರಾಮದ ನಿವಾಸಿ ಮೋನು ಎಂಬಾತ ತನ್ನ ಮಗಳನ್ನ ಕಬಡ್ಡಿ ತರಬೇತಿಗೋಸ್ಕರ ಕಳೆದ ಫೆಬ್ರವರಿ ತಿಂಗಳಲ್ಲಿ ಇಂದೋರ್ನಲ್ಲಿರುವ ಅಕಾಡೆಮಿಗೆ ಕರೆದುಕೊಂಡು ಹೋಗಿದ್ದರು. ಆದರೆ, ಕೆಲ ತಿಂಗಳ ನಂತರ ಅಲ್ಲಿನ ವಾತಾವರಣ ಸರಿ ಬಾರದ ಕಾರಣ ತಮ್ಮ ಮಗಳನ್ನ ವಾಪಸ್ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ರೈಲಿನಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಆರೋಪಿಯೋರ್ವ ನಶೆ ಬರುವ ಪದಾರ್ಥ ನೀಡಿದ್ದಾನೆ. ಇದರ ಬೆನ್ನಲ್ಲೇ ಆಕೆಯನ್ನ ಶೌಚಾಲಯದೊಳಗೆ ಕರೆದುಕೊಂಡು ಹೋಗಿ, ದುಷ್ಕೃತ್ಯವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ತಾಯಿ ದೂರು ದಾಖಲು ಮಾಡಿದ್ದು, ಆರೋಪಿ ವಿರುದ್ಧ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.