ಪಶ್ಚಿಮ ಬಂಗಾಳ: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹಿಂಸಾಚಾರದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ, ಪಶ್ಚಿಮ ಬಂಗಾಳದ ಆಡಳಿತಾರೂಢ ಪಕ್ಷ ಟಿಎಂಸಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
"ಈ ಹಿಂದೆ ಹಲವಾರು ಬಿಜೆಪಿ ಕಾರ್ಯಕರ್ತರನ್ನು ಕೊಂದಿರುವ ಟಿಎಂಸಿ ಕಾರ್ಯಕರ್ತರಿಗೆ ಇದು ಹೊಸತೇನೂ ಅಲ್ಲ. ಹಿಂಸಾಚಾರದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರವನ್ನು ಮುನ್ನಡೆಸಿದ್ದಾರೆ" ಎಂದು ಅವರು ಆರೋಪಿಸಿದರು.