ಕರ್ನಾಟಕ

karnataka

ETV Bharat / bharat

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ: ನಾಲ್ವರು ಯುವತಿಯರ ರಕ್ಷಣೆ, ಇಬ್ಬರು ಬಂಧನ - ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರು ಯುವತಿಯರನ್ನು ರಕ್ಷಿಸಿ, ಇಬ್ಬರು ಯುವಕರನ್ನು ಬಂಧಿಸಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

kaithal Sex racket busted by guhla cheeka police
ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ

By

Published : Jun 21, 2021, 4:28 PM IST

Updated : Jun 21, 2021, 4:37 PM IST

ಕೈತಾಲ್(ಹರಿಯಾಣ): ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈಗ ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಿಸಿ,ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗುಹ್ಲಾ ಚೀಕಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಈ ಸ್ಪಾ ಕೇಂದ್ರವನ್ನು ಹೋಮ್ ಗಾರ್ಡ್ ಅಧಿಕಾರಿ ನಡೆಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಹೋಮ್ ಗಾರ್ಡ್ ಅಧಿಕಾರಿಯ ಇನ್ನೋವಾ ಕಾರಿನಲ್ಲಿದ್ದ ಸಮವಸ್ತ್ರವನ್ನು ಸ್ಥಳದಿಂದ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ಅಗತ್ಯವಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಓದಿ:ಕೊರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನಿರಾಕರಣೆ: ಕೇಂದ್ರದ ವಿರುದ್ಧ ರಾಗಾ ಕಿಡಿ

Last Updated : Jun 21, 2021, 4:37 PM IST

ABOUT THE AUTHOR

...view details