ಕರ್ನಾಟಕ

karnataka

ETV Bharat / bharat

Kallakurichi Violence: ಪೊಲೀಸ್​ ಬಿಗಿ ಭದ್ರತೆಯಲ್ಲಿ ವಿದ್ಯಾರ್ಥಿನಿ ಮೃತದೇಹ ಪಾಲಕರಿಗೆ ಹಸ್ತಾಂತರ - Kallakurichi Violence

ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಹಿಂಸಾಚಾರಕ್ಕೆ ಕಾರಣವಾಗಿದ್ದ ವಿದ್ಯಾರ್ಥಿನಿ ಮೃತದೇಹವನ್ನು ಪೊಲೀಸ್​ ಬಿಗಿ ಭದ್ರತೆಯಲ್ಲಿ ಪಾಲಕರಿಗೆ ಹಸ್ತಾಂತರಿಸಲಾಗಿದೆ.

ಪೊಲೀಸ್​ ಬಿಗಿ ಭದ್ರತೆಯಲ್ಲಿ ವಿದ್ಯಾರ್ಥಿನಿ ಮೃತದೇಹ ಪಾಲಕರಿಗೆ ಹಸ್ತಾಂತರ
ಪೊಲೀಸ್​ ಬಿಗಿ ಭದ್ರತೆಯಲ್ಲಿ ವಿದ್ಯಾರ್ಥಿನಿ ಮೃತದೇಹ ಪಾಲಕರಿಗೆ ಹಸ್ತಾಂತರ

By

Published : Jul 23, 2022, 8:44 AM IST

ಕಲ್ಲಕುರಿಚಿ(ತಮಿಳುನಾಡು):ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ತಮಿಳುನಾಡಿನಲ್ಲಿ ಭಾರಿ ಹಿಂಸಾಚಾರ, ವಿಧ್ವಂಸಕ ಕೃತ್ಯಕ್ಕೆ ಕಾರಣವಾಗಿತ್ತು. ಜುಲೈ 17ರಂದು ವಸತಿ ನಿಲಯದ ಕಟ್ಟಡದ ಮೇಲಿಂದ ಹಾರಿ ಮೃತಪಟ್ಟ 12ನೇ ತರಗತಿ ವಿದ್ಯಾರ್ಥಿನಿಯ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ. ಅಲ್ಲದೇ, ಗ್ರಾಮಕ್ಕೆ ಪಾರ್ಥಿವ ಶರೀರವನ್ನು ತರಲಾಗಿದ್ದು, ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ನಡೆಸಲಾಗುತ್ತಿದೆ.

ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಪೋಷಕರಿಗೆ ಮೃತದೇಹವನ್ನು ನೀಡಲಾಗಿದೆ. ಪೋಷಕರ ದಾಖಲೆಗಳಿಗೆ ಸಹಿ ಹಾಕಿ ಶವ ಪಡೆದುಕೊಂಡರು.

ವಿದ್ಯಾರ್ಥಿನಿ ಸಾವಿನ ಬಳಿಕ ಸುದ್ದಿ ಕಾಡ್ಗಿಚ್ಚಿನಂತೆ ಹರಡಿ ಕಾಲೇಜು ಮತ್ತು ವಸತಿನಿಲಯಕ್ಕೆ ನುಗ್ಗಿದ ಉದ್ರಿಕ್ತರು ಕಟ್ಟಡಕ್ಕೆ ಹಾನಿ ಮಾಡಿದ್ದರು. ಅಲ್ಲದೇ, ಕಾಲೇಜಿಗೆ ಸೇರಿದ ಹಲವಾರು ವಾಹನಗಳನ್ನು ಬೆಂಕಿ ಹಚ್ಚಿ ಸುಟ್ಟು ಹಾಕಿ ಭಾರೀ ಹಿಂಸಾಚಾರ ನಡೆದಿತ್ತು. ಪ್ರತಿಭಟನೆಯ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸರು ಸಹ ಗಾಯಗೊಂಡಿದ್ದರು.

ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿ ಪ್ರತಿಭಟನೆಯನ್ನು ನಿಯಂತ್ರಿಸಲಾಗಿತ್ತು. ಇಂದು ಸಹ ಕಾಲೇಜು ಮತ್ತು ವಸತಿ ನಿಲಯಕ್ಕೆ ಭಾರಿ ಬಿಗಿ ಪೊಲೀಸ್ ಬಂದೋಬಸ್ತ್​ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರು ಸೇರಿ ಮೂವರನ್ನು ಬಂಧಿಸಲಾಗಿದೆ. ಆಸ್ಪತ್ರೆಗೆ ಬಿಗಿ ಭದ್ರತೆ ನೀಡಲಾಗಿದೆ.

ಓದಿ:ಹರಿದ್ವಾರ ಯಾತ್ರೆ ಮುಗಿಸಿ ಬರುತ್ತಿದ್ದವರ ಮೇಲೆ ಹರಿದ ಟ್ರಕ್​.. ಐವರು ದುರ್ಮರಣ

ABOUT THE AUTHOR

...view details