ಲಖನೌ(ಉತ್ತರ ಪ್ರದೇಶ):ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಉತ್ತರ ಪ್ರದೇಶ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಯೋಜನೆಯೊಂದಕ್ಕೆ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಮಾಹಿತಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ನವನೀತ್ ಸೆಹಗಲ್ ಈ ಕುರಿತು ಟ್ವೀಟ್ ಮಾಡಿದ್ದು ' ಖ್ಯಾತ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶ ಸಿಎಂ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದರು. ಅವರಿಗೆ ಒಂದು ಜಿಲ್ಲೆ - ಒಂದು ಉತ್ಪನ್ನ ಯೋಜನೆಯ ಉತ್ಪನ್ನವನ್ನು ಸಿಎಂ ನೀಡಿದ್ದಾರೆ. ಕಂಗನಾ ಅವರು ಒಂದು ಜಿಲ್ಲೆ-ಒಂದು ಉತ್ಪನ್ನ ಯೋಜನೆಯ ಬ್ರಾಂಡ್ ಅಂಬಾಸಿಡರ್ ಆಗಲಿದ್ದಾರೆ' ಎಂದಿದ್ದಾರೆ.
ಎನಿದು ಒಂದು ಜಿಲ್ಲೆ-ಒಂದು ಉತ್ಪನ್ನ ಯೋಜನೆ?