ಮುಂಬೈ:ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ರ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಲಾಗಿದೆ. ನಿಯಮ ಉಲ್ಲಂಘಿಸಿ ಪೋಸ್ಟ್ಗಳನ್ನು ಮಾಡಿದ್ದಕ್ಕಾಗಿ ಟ್ವಿಟರ್ ಈ ನಿರ್ಧಾರ ತೆಗೆದುಕೊಂಡಿದೆ.
ಕಂಗನಾ ರಣಾವತ್ ಟ್ವಿಟರ್ ಖಾತೆ ರದ್ದು - ಕಂಗನಾ ಟ್ವೀಟ್
ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರಗಳ ಬಗ್ಗೆ ವಿವಾದಾತ್ಮಕ ಟ್ವೀಟ್ಗಳನ್ನು ಮಾಡಿದ್ದ ನಟಿ ಕಂಗನಾ ರಣಾವತ್ರ ಟ್ವಿಟರ್ ಖಾತೆಯನ್ನು ರದ್ದುಗೊಳಿಸಲಾಗಿದೆ.

ಕಂಗನಾ ರಣಾವತ್
ಇತ್ತೀಚೆಗಷ್ಟೇ ಕಂಗನಾ, ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರಗಳ ಬಗ್ಗೆ ವಿವಾದಾತ್ಮಕವಾಗಿ ಸರಣಿ ಟ್ವೀಟ್ಗಳನ್ನು ಮಾಡಿದ್ದರು. ಬಿಜೆಪಿಯನ್ನು ಸೋಲಿಸಿದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ವಿರುದ್ಧ ಹಾಗೂ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಒತ್ತಾಯಿಸಿ ಟ್ವೀಟ್ ಮಾಡಿದ್ದರು.
ಇದನ್ನೂ ಓದಿ:'ನಮಗೆ ಹೇಳಲು ನೀವು ಯಾರು? : ಸರ್ಕಾರದ ಕೋವಿಡ್ ನಿರ್ವಹಣೆ ಬಗ್ಗೆ ಟೀಕಿಸುವವರಿಗೆ ಕಂಗನಾ ಪ್ರಶ್ನೆ