ನವದೆಹಲಿ:ರಾಜ್ಯದಿಂದ ಕೇಂದ್ರ ಸಚಿವ ಸ್ಥಾನಕ್ಕೆ ಆಯ್ಕೆಯಾದ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಸಂಪುಟ ದರ್ಜೆಯ ಖಾತೆಗಳು ಸಿಗದೇ ನಿರಾಸೆಯಾದರೂ, ನಾಲ್ಕು ಮಂದಿ ಹೊಸ ಮುಖಗಳಿಗೆ ಮೋದಿ ಸರ್ಕಾರ ಮಣೆ ಹಾಕಿರುವುದು ಸಂತಸ ಮೂಡಿಸಿದೆ.
ರಾಜ್ಯಸಭಾ ಸದಸ್ಯರಾಗಿ, ಈಗ ಸಚಿವ ಸ್ಥಾನ ಪಡೆದಿರುವ ರಾಜೀವ್ ಚಂದ್ರಶೇಖರ್ ಅವರಿಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನದ ಖಾತೆಗಳ ರಾಜ್ಯ ಸಚಿವ ಸ್ಥಾನ ಒಲಿದು ಬಂದಿದೆ.
ಮಹಿಳಾ ಮಣಿಗಳಲ್ಲಿ ಶೋಭಾ ಕರಂದ್ಲಾಜೆ ಕೇಂದ್ರ ಸಚಿವೆಯಾಗಿ ಆಯ್ಕೆಯಾಗಿದ್ದು, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ರಾಜ್ಯ ಸಚಿವೆಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.