ಚೆನ್ನೈ:ಕರ್ನಾಟಕ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಪ್ರಸಿದ್ಧರಾಗಿದ್ದ ಕೆ. ಅಣ್ಣಾಮಲೈ ರಾಜಕೀಯ ಭವಿಷ್ಯ ನಿರ್ಧರಿಸಿಕೊಳ್ಳಲು ಮುಂದಾಗಿದ್ದು, ಇಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ಅಣ್ಣಾಮಲೈ ತಮಿಳುನಾಡು ವಿಧಾನಸಭೆಯ ಅರವಕುರಿಚಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದು, ಇಂದು ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಅವರು ಉಮೇದುವಾರಿಕೆ ಸಲ್ಲಿಸಿದರು. ಇವರಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಾಥ್ ನೀಡಿದರು.
ರೋಡ್ ಶೋದಲ್ಲಿ ತೇಜಸ್ವಿ ಸೂರ್ಯ ಭಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಚೆನ್ನೈನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಕಮಲ ಹಿಡಿದ ಇವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿತ್ತು.
ನಾಮಪತ್ರ ಸಲ್ಲಿಕೆಗೂ ಮುಂಚೆ ರೋಡ್ ಶೋ ನಾಮಪತ್ರ ಸಲ್ಲಿಕೆ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಣ್ಣಾಮಲೈ, ನಾಮಪತ್ರ ಸಲ್ಲಿಕೆಯಲ್ಲಿ ನನ್ನೊಂದಿಗೆ ಸಾಥ್ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಾನು ಸಾಮಾನ್ಯ ಜನರ ಅಭ್ಯರ್ಥಿಯಾಗಿದ್ದೇನೆ ಮತ್ತು ನನ್ನ ನಾಮನಿರ್ದೇಶನ ಸಲ್ಲಿಕೆ ಮಾಡಲು ಸೈಕಲ್ ಮೇಲೆ ತೆರಳಿದ್ದೇನೆ ಎಂದಿದ್ದಾರೆ.
ತಮಿಳುನಾಡಿನ 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 6ರಂದು ಚುನಾವಣೆ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, 20 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ.