ಕಾನ್ಪುರ (ಉತ್ತರಪ್ರದೇಶ): ದಲಿತರ ಮನೆಗೆ ನುಗ್ಗಿ ದುಷ್ಕರ್ಮಿಗಳು ದಾಂಧಲೆ ನಡೆಸಿರುವ ಘಟನೆ ಇಲ್ಲಿನ ಬಿಲಹೌರ್ ಪೊಲೀಸ್ ಠಾಣೆ ವ್ಯಾಪ್ತಿಯ ಚಕ್ತಾಪುರ ಗ್ರಾಮದಲ್ಲಿ ನಡೆದಿದೆ. ಸುಮಾರು 12ಕ್ಕೂ ಹೆಚ್ಚು ದುಷ್ಕರ್ಮಿಗಳು ದಲಿತರಿಗೆ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ಗಂಭೀರ ಗಾಯಗೊಂಡಿದ್ದಾರೆ.
ಪ್ರಕರಣ ಸಂಬಂಧ ಬಿಲಹೌರ್ ಪೊಲೀಸರ ವಿರುದ್ಧ ಸಂತ್ರಸ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ದೂರಿನ ಪತ್ರವನ್ನು ಹಲವು ಬಾರಿ ಬದಲಾಯಿಸಲಾಗಿದೆ. ಠಾಣೆಯಲ್ಲಿ ಇನ್ನೊಂದು ಕಡೆಯ ವರದಿಯನ್ನು ಮಾತ್ರ ಬರೆಯಲಾಗಿದೆ. ಆದರೆ, ನಮಗೆ ಆಶ್ವಾಸನೆಯನ್ನು ಮಾತ್ರ ನೀಡಿದ್ದಾರೆ ಎಂದು ಸಂತ್ರಸ್ತರು ಆರೋಪಿಸಿದ್ದಾರೆ.