ಉತ್ತರ ಪ್ರದೇಶ:ಇಲ್ಲಿನ ಕಾನ್ಪುರದ ಪಂಕಿ ಆಕ್ಸಿಜನ್ ಸ್ಥಾವರದಲ್ಲಿ ಮರುಪೂರಣ ಮಾಡುತ್ತಿದ್ದಾಗ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಓರ್ವ ಸಾವನ್ನಪ್ಪಿದ್ದಾನೆ. ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಮ್ಲಜನಕದ ಸಿಲಿಂಡರ್ ಸ್ಫೋಟ: ಓರ್ವ ಸಾವು - ಉತ್ತರಪ್ರದೇಶ
ಆಮ್ಲಜನಕದ ಸಿಲಿಂಡರ್ ಮರುಪೂರಣ ಮಾಡುತ್ತಿದ್ದಾಗ ಸ್ಫೋಟಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ದಾದಾ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಆಮ್ಲಜನಕ ಸಿಲಿಂಡರ್ ಸ್ಪೋಟ
ಈ ಘಟನೆ ದಾದಾ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆಮ್ಲಜನಕ ಸಿಲಿಂಡರ್ ಮರುಪೂರಣದ ಸಮಯದಲ್ಲಿ ಅವಘಡ ಸಂಭವಿಸಿದೆ. ಮೃತನನ್ನು ಆಕ್ಸಿಜನ್ ಪ್ಲಾಂಟ್ ಕೆಲಸಗಾರ ಇಮ್ರಾದ್ ಅಲಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ವ್ಯಕ್ತಿಯೊಬ್ಬರು ಲಾಲಾ ಲಜಪತ್ ರಾಯ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೊಬ್ಬ ಗಾಯಾಳುವಿಗೆ ವೈದ್ಯಕೀಯ ನೆರವು ನೀಡಿದ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.