ಲಡಾಖ್ : ಪ್ರತಿ ವರ್ಷ ದೇಶದಲ್ಲಿ ಜುಲೈ 26ರಂದು ಕಾರ್ಗಿಲ್ ವಿಜಯ್ ದಿವಸ್ ಅಥವಾ ಕಾರ್ಗಿಲ್ ವಿಜಯ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದು ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್, ವಾಯುಪಡೆ ಮುಖ್ಯಸ್ಥ ಹಾಗು ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್, ಭೂಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಭೇಟಿ ನೀಡಿ ಪುಷ್ಪ ನಮನ ಅರ್ಪಿಸಿದರು. ಈ ಮೂಲಕ 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದರು.
ಕಾರ್ಗಿಲ್ ವಿಜಯ ದಿನದ ಮಹತ್ವ : ಭಾರತದಲ್ಲಿ ಪ್ರತಿ ವರ್ಷ ಜುಲೈ 26 ಅನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಈ ಮೂಲಕ ಯುದ್ಧದಲ್ಲಿ ಹೋರಾಡಿದ ಹಾಗೂ ಮಡಿದ ಸೈನಿಕರಿಗೆ ಗೌರವ ಸಲ್ಲಿಸಲಾಗುತ್ತದೆ. ವಿಜಯ ದಿನದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಪೈಪ್ ಬ್ಯಾಂಡ್ ಮತ್ತು ಸ್ಟ್ಯಾಟಿಕ್ ಬ್ಯಾಂಡ್ ಪ್ರದರ್ಶನ ಮತ್ತು ಬೀಟಿಂಗ್ ರಿಟ್ರೀಟ್ ಮೂಲಕ ಹುತಾತ್ಮರಿಗೆ ದೀಪಗಳನ್ನು ಬೆಳಗಿಸುವುದು ಮತ್ತು ಪ್ರಾರ್ಥನೆ ಸಲ್ಲಿಸುವುದು ಕೂಡ ನಡೆಯುತ್ತದೆ. ಅಷ್ಟೇ ಅಲ್ಲದೆ, ಯುದ್ಧದಲ್ಲಿ ದೇಶಕ್ಕಾಗಿ ಹೋರಾಡಿ ವೀರಮರಣ ಹೊಂದಿದ ಸೈನಿಕರ ತ್ಯಾಗ, ಬಲಿದಾನವನ್ನು ಸ್ಮರಿಸಲಾಗುತ್ತದೆ. ಹಾಗಾಗಿ, ಭಾರತೀಯರು ಎಂದೂ ಮರೆಯಲಾಗದ ಅವಿಸ್ಮರಣೀಯ ದಿನಗಳಲ್ಲಿ ಇದು ಕೂಡ ಒಂದು.
ಇದನ್ನೂ ಓದಿ :ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರಯೋಧರಿಗೆ ಗೌರವ : ದ್ರಾಸ್‌ನಲ್ಲಿ ಸ್ಮಾರಕಕ್ಕೆ ಪುಷ್ಪ ನಮನ