ನವದೆಹಲಿ: ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನ ಭೇಟಿಯಾಗಿದ್ದಾರೆ. ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಬೊಮ್ಮಾಯಿ ಬಿಜೆಪಿ ನಾಯಕರ ಭೇಟಿಯಾಗಿ ಕೃತಜ್ಞತೆ ಸಲ್ಲಿಸಲಿದ್ದಾರೆ. ರಾಜನಾಥ್ ಸಿಂಗ್ ಅವರ ಭೇಟಿಯಾಗಿ ಮೈಸೂರು ಪೇಟ ತೊಡಸಿ ಕೃತಜ್ಞತೆ ಅರ್ಪಿಸಿದ್ದಾರೆ.
ರಕ್ಷಣಾ ಸಚಿವರಿಗೆ ಮೈಸೂರು ಪೇಟ ತೊಡಿಸಿ ಕೃತಜ್ಞತೆ ಅರ್ಪಿಸಿದ ಸಿಎಂ ಬೊಮ್ಮಾಯಿ - ಪ್ರಧಾನಿ ನರೇಂದ್ರ ಮೋದಿ
ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಬೊಮ್ಮಾಯಿ ಬಿಜೆಪಿ ನಾಯಕರ ಭೇಟಿಯಾಗಿ ಕೃತಜ್ಞತೆ ಸಲ್ಲಿಸಲಿದ್ದಾರೆ. ರಾಜನಾಥ್ ಸಿಂಗ್ ಅವರ ಭೇಟಿಯಾಗಿ ಮೈಸೂರು ಪೇಟ ಹಾಕಿ ಕೃತಜ್ಞತೆ ಅರ್ಪಿಸಿದ್ದಾರೆ.
ರಾಜ್ಯದ ಅಭಿವೃದ್ಧಿ ಹಾಗೂ ಸಚಿವ ಸಂಪುಟ ರಚನೆ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಮಧ್ಯಾಹ್ನ 1:00 ಗಂಟೆಗೆ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರದ ಸಚಿವರು ಹಾಗೂ ಸಂಸತ್ ಸದಸ್ಯರ ಜೊತೆ ಸಭೆ ನಡೆಸಲಿರುವ ಸಿಎಂ, ಕೇಂದ್ರ ಸರ್ಕಾರದ ಮಟ್ಟದಲ್ಲಿ ಬಾಕಿ ಇರುವ ಕಡತ, ಬಾಕಿ ಯೋಜನೆ, ಮಂಜೂರಾತಿಗಾಗಿ ಇರುವ ಕಾಮಗಾರಿಗಳ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಿದ್ದಾರೆ.
ಇಂದು ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ ಬೊಮ್ಮಾಯಿ, ನಾಳೆ ವಾಪಸ್ ಬರುವ ಸಮಯವನ್ನು ಕಾಯ್ದಿರಿಸಿದ್ದಾರೆ. ಕೊನೆ ಕ್ಷಣದ ಬದಲಾವಣೆ, ವರಿಷ್ಠರು ಮತ್ತೆ ಚರ್ಚೆ ನಡೆಸುವ ಇಂಗಿತ ವ್ಯಕ್ತಪಡಿಸಿದರೆ ಅನುಕೂಲ ಆಗಲು ಸಮಯ ಕಾಯ್ದಿರಿಸಿಕೊಂಡಿದ್ದಾರೆ.