ಕರ್ನಾಟಕ

karnataka

ETV Bharat / bharat

'ರಾಜ್ಯ ರಾಜಕಾರಣದಲ್ಲೇ ಉಳಿಯುವೇ, ರಾಷ್ಟ್ರ ರಾಜಕಾರಣಕ್ಕೆ ಬರಲ್ಲ.. ಮತ್ತೊಮ್ಮೆ ಸ್ಪಷ್ಟಪಡಿಸಿದ ಸಿದ್ದು - ವಿಪಕ್ಷ ನಾಯಕ ಸಿದ್ದರಾಮಯ್ಯ

ಮುಂದಿನ ವರ್ಷ ಪಂಚ ರಾಜ್ಯಗಳ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್​ ಪಕ್ಷದ ಕೆಲವೊಂದು ಹುದ್ದೆಗಳಲ್ಲಿ ಮಹತ್ವದ ಬದಲಾವಣೆ ಮಾಡಲು ನಿರ್ಧರಿಸಿದ್ದು, ಅದಕ್ಕಾಗಿ ಸಿದ್ದರಾಮಯ್ಯ ಅವರಿಗೆ ಬುಲಾವ್ ನೀಡಿತ್ತು.

Siddaramaiah
Siddaramaiah

By

Published : Oct 5, 2021, 5:39 PM IST

Updated : Oct 5, 2021, 5:44 PM IST

ನವದೆಹಲಿ:ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿ ಪ್ರವಾಸದಲ್ಲಿದ್ದಾರೆ. ಈ ವೇಳೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ ಮಹತ್ವದ ಮಾಹಿತಿ ಹೊರಹಾಕಿದ್ದಾರೆ.

ಸೋನಿಯಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ ಮಾತು

ಈ ಹಿಂದೆ ಕಾಂಗ್ರೆಸ್​​​​ ಪಕ್ಷದ ಪ್ರಧಾನ ಕಾರ್ಯದರ್ಶಿ ಆಗುವಂತೆ ನನ್ನ ಬಳಿ ರಾಹುಲ್​ ಗಾಂಧಿ ಮನವಿ ಮಾಡಿಕೊಂಡಿದ್ದರು. ಆದರೆ ನಾನು ಆ ಆಫರ್​ ತಿರಸ್ಕಾರ ಮಾಡಿದ್ದೇನೆ ಎಂದು ತಿಳಿಸಿದರು. ರಾಷ್ಟ್ರ ರಾಜಕಾರಣದಲ್ಲಿ ನನಗೆ ಯಾವುದೇ ರೀತಿಯ ಆಸಕ್ತಿ ಇಲ್ಲ. ಕರ್ನಾಟಕ ರಾಜಕೀಯದಲ್ಲಿ ಮಾತ್ರ ಉಳಿಯುವುದಾಗಿ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಸುದ್ದಿಗಾರರು ಕೇಳಿರುವ ಪ್ರಶ್ನೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ನನಗೆ ಈ ಭೇಟಿ ವೇಳೆ ಕೇಳಿಲ್ಲ. ಆ ರೀತಿಯ ಸುದ್ದಿ ಹರಿದಾಡುತ್ತಿದ್ದು, ಅದು ಸುದ್ಧ ಸುಳ್ಳು ಎಂದರು.

ಇದನ್ನೂ ಓದಿರಿ:ದೆಹಲಿಯಲ್ಲಿ ಸೋನಿಯಾ ಭೇಟಿಯಾದ ಸಿದ್ದರಾಮಯ್ಯ; ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ

ಕಳೆದ ಕೆಲ ದಿನಗಳ ಹಿಂದೆ ದೆಹಲಿಗೆ ಬರುವಂತೆ ಸಿದ್ದರಾಮಯ್ಯಗೆ ಹೈಕಮಾಂಡ್​ನಿಂದ ಬುಲಾವ್​ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರು ರಾಷ್ಟ್ರ ರಾಜಧಾನಿಗೆ ತೆರಳಿದ್ದರು.

Last Updated : Oct 5, 2021, 5:44 PM IST

ABOUT THE AUTHOR

...view details