ಬೆಂಗಳೂರು: ಹಿಜಾಬ್ ಮತ್ತು ಕೇಸರಿ ಪ್ರಕರಣವನ್ನು ಏಕಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದೆ. ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠದಿಂದ ಪ್ರಕರಣ ಕುರಿತು 2 ದಿನ ನಡೆದ ವಿಚಾರಣೆ ಅಂತ್ಯಗೊಂಡಿದೆ.
ಹಿಜಾಬ್ ಧರಿಸಿ ಕಾಲೇಜಿಗೆ ತೆರಳಲು ಅವಕಾಶ ನೀಡಲು ಮಧ್ಯಂತರ ಆದೇಶಕ್ಕೆ ಅರ್ಜಿದಾರರು ಕೋರಿದ್ದರು. ಇದನ್ನು ನಿರಾಕರಿಸಿದ ಹೈಕೋರ್ಟ್, ಪ್ರಕರಣ ಸೂಕ್ಷ್ಮವಾದ ಕಾರಣ ವಿಸ್ತೃತ ಪೀಠದಲ್ಲಿಯೇ ವಿಚಾರಣೆ ನಡೆಯಬೇಕು. ಇದಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಕರಣವನ್ನು ವರ್ಗಾಯಿಸಲಾಗುವುದು. ವಿಸ್ತೃತ ಪೀಠ ರಚನೆ ಅಧಿಕಾರ ಮುಖ್ಯ ನ್ಯಾಯಮೂರ್ತಿಗಳಿಗಿದೆ.
ಅವರೇ ಈ ಪ್ರಕರಣವನ್ನು ನಿರ್ಧರಿಸಬೇಕು. ಅಲ್ಲದೆ, ಪ್ರಕರಣದ ತುರ್ತು ವಿಚಾರಣೆ ಅಗತ್ಯವಿದೆ. ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ. ಸಂಪೂರ್ಣ ಕಡತಗಳನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ರವಾನಿಸಿ ಎಂದು ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರು ಹೈಕೋರ್ಟ್ ರಿಜಿಸ್ಟ್ರಾರ್ಗೆ ನಿರ್ದೇಶನ ನೀಡಿದರು. ಇದರಿಂದಾಗಿ ಹಿಜಾಬ್ -ಕೇಸರಿ ಪ್ರಕರಣ ಇದೀಗ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಬಂದಿದೆ.
ಹಿಜಾಬ್ ಮತ್ತು ಕೇಸರಿ ವಿವಾದದ ಕುರಿತು ಹೈಕೋರ್ಟ್ನಲ್ಲಿ 2ನೇ ದಿನದ ವಿಚಾರಣೆ ಇಂದು ಮಧ್ಯಾಹ್ನ 2.30 ರಿಂದ ಶುರುವಾಯಿತು. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಕಿಕೊಳ್ಳಲು ಅವಕಾಶ ನೀಡಬೇಕು ಎಂದು ಕೋರಿ ವಿದ್ಯಾರ್ಥಿಗಳು 4 ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸುತ್ತಿದೆ.
ಎರಡನೇ ದಿನದ ಆರಂಭದಲ್ಲಿಯೇ ಅರ್ಜಿದಾರರ ಪರ ಮತ್ತು ಸರ್ಕಾರದ ಪರ ವಕೀಲರಿಗೆ ನ್ಯಾಯಮೂರ್ತಿಗಳು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ನೀಡಬಹುದೇ ಎಂದು ಪ್ರಶ್ನಿಸಿದರು.
ಈ ವೇಳೆ ಉತ್ತರಿಸಿದ ವಕೀಲರು ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವಹಿಸುವುದು ಕೋರ್ಟ್ ವಿವೇಚನೆಗೆ ಬಿಟ್ಟಿದ್ದು. ಕಾನೂನು ವಿಷಯವನ್ನು ನ್ಯಾಯಾಲಯವೇ ವಿಚಾರಿಸಬೇಕು. ಎಲ್ಲರೂ ಕೋರ್ಟ್ ತೀರ್ಪಿಗಾಗಿ ಎದುರು ನೋಡುತ್ತಿದ್ದಾರೆ. ಯಾವ ತೀರ್ಪನ್ನಾದರೂ ಕೊಡಿ, ಬೇಗ ತೀರ್ಪು ನೀಡಿ ಎಂದು ಸರ್ಕಾರದ ಪರ ವಕೀಲ ಪ್ರಭುಲಿಂಗ ನಾವದಗಿ ಕೇಳಿಕೊಂಡರು. ಈ ವೇಳೆ ಸಮವಸ್ತ್ರ ಸಂಹಿತೆ ರೂಪಿಸಲು ಸರ್ಕಾರಕ್ಕೆ ಅಧಿಕಾರವಿದೆಯೇ ಎಂದು ಕೋರ್ಟ್ ಪ್ರಶ್ನಿಸಿದಾಗ, 2 ತಿಂಗಳು ಹಿಜಾಬ್ಗೆ ಅವಕಾಶ ಮಾಡಿಕೊಟ್ಟರೆ ಆಕಾಶ ಬೀಳಲ್ಲ.
ಹಿಜಾಬ್ ಮೂಲಭೂತ ಹಕ್ಕು ಎನ್ನುವುದು ಪ್ರಶ್ನೆಯೇ ಅಲ್ಲ, ಸರ್ಕಾರಕ್ಕೆ ಸಮವಸ್ತ್ರ ಸಂಹಿತೆ ರೂಪಿಸುವ ಹಕ್ಕಿದೆಯೇ ಎಂಬುದೇ ಈಗಿನ ಪ್ರಶ್ನೆ ಎಂದು ಅರ್ಜಿದಾರರ ಪರ ವಕೀಲರರು ಪ್ರಶ್ನಿಸಿದರು. ಇದಕ್ಕೆ, ಹಿಜಾಬ್ ಧರಿಸುವುದು ಅನಿವಾರ್ಯವೇ ಎಂದು ನ್ಯಾಯಾಧೀಶರು ಪ್ರಶ್ನಿಸಿದರು.
ಹಿಜಾಬ್ ನಿರ್ಬಂಧಿಸದಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪ್ರಾರಂಭಿಸಿದ ಹೈಕೋರ್ಟ್
- ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠದಲ್ಲಿ ಅರ್ಜಿಗಳ ವಿಚಾರಣೆ
- ಪ್ರಕರಣವನ್ನು ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸುವ ಅಗತ್ಯವಿದೆ ಎಂದ ಅಭಿಪ್ರಾಯಪಟ್ಟ ನ್ಯಾಯಮೂರ್ತಿ
- ಎಲ್ಲರೂ ಒಪ್ಪಿದರೆ ವಿಸ್ತೃತ ಪೀಠಕ್ಕೆ ಒಪ್ಪಿಸಬಹುದು ಎಂದರು ನ್ಯಾ. ಕೃಷ್ಣ ಎಸ್ ದೀಕ್ಷಿತ್
- ವಿಸ್ತೃತ ಪೀಠಕ್ಕೆ ಒಪ್ಪಿಸುವುದು ನ್ಯಾಯಾಲಯದ ವಿವೇಚನೆಗೆ ಬಿಟ್ಟ ವಿಚಾರ ಎಂದರು ಎಜಿ
- ಪ್ರಕರಣ ವಿಸ್ತೃತ ಪೀಠಕ್ಕೆ ಒಪ್ಪಿಸುವ ಅಗತ್ಯವಿಲ್ಲ. ಈಗಾಗಲೇ ವಾದ ಮಂಡನೆಯಾಗಿದೆ ಅರ್ಜಿ ವಿಚಾರಣೆ ಮುಂದುವರೆಸಲು ವಕೀಲರ ಸಲಹೆ
- ಅರ್ಜಿ ವಿಚಾರಣೆ ಮುಂದುವರೆಸಿದ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್