ಪಣಜಿ(ಗೋವಾ) : ಕರ್ನಾಟಕ ನೋಂದಣಿಯ ಕಾರಿನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ ಎಂದು ಗೋವಾ ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತ ವ್ಯಕ್ತಿಯನ್ನು ಕರ್ನಾಟಕದ ಧಾರವಾಡ ಮೂಲದ ಶ್ರೀಕಾಂತ್ ಕಾಂಚಂಗಾರ್ (39) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗೋವಾದಲ್ಲಿ ಕರ್ನಾಟಕ ಮೂಲದ ವ್ಯಕ್ತಿ ಶವವಾಗಿ ಪತ್ತೆ - ಪಣಜಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಶವ ಪತ್ತೆ
ಕರ್ನಾಟಕ ನೋಂದಣಿಯ ಕಾರಿನಲ್ಲಿ ವ್ಯಕ್ತಿಯ ಶವ ಗೋವಾದಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕರ್ನಾಟಕದ ಧಾರವಾಡ ಮೂಲದ ಶ್ರೀಕಾಂತ್ ಕಾಂಚಂಗಾರ್ ಎಂದು ಗುರುತಿಸಲಾಗಿದೆ.
ಪಣಜಿಯಲ್ಲಿ ಕರ್ನಾಟಕ ಮೂಲದ ವ್ಯಕ್ತಿಯ ಶವ ಪತ್ತೆ
ನಾವು ಮೃತರ ಕುಟುಂಬ ಸದಸ್ಯರನ್ನು ಸಂಪರ್ಕಿಸಿದ್ದೇವೆ, ಮೃತ ದೇಹವನ್ನು ಗೋವಾ ವೈದ್ಯಕೀಯ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕು: ಶಾಸಕ ರಂಗನಾಥ್ ಆಗ್ರಹ