ನವದೆಹಲಿ: ಕರ್ನಾಟಕದಲ್ಲಿ ಗಣಿಗಾರಿಕೆವಿಚಾರವಾಗಿ ನ್ಯಾಯಮೂರ್ತಿಗಳಾದ ಎಸ್ ಅಬ್ದುಲ್ ನಜೀರ್ ಮತ್ತು ಎಎಸ್ ಬೋಪಣ್ಣ ಅವರು ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಹೀಗಾಗಿ ಸಿಜೆಐ ಯು ಯು ಲಲಿತ್ ಅವರು ಕರ್ನಾಟಕ ಗಣಿಗಾರಿಕೆ ವಿಷಯವನ್ನು ನ್ಯಾಯಮೂರ್ತಿ ಕೆ ಎಂ ಜೋಸೆಫ್ ನೇತೃತ್ವದ ಪೀಠಕ್ಕೆ ನಿಯೋಜನೆ ಮಾಡಿ ಆದೇಶ ನೀಡಿದ್ದಾರೆ. ಮುಂದಿನ ವಾರಕ್ಕೆ ಈ ವಿಚಾರಣೆಯನ್ನು ಮುಂದೂಡಲಾಗಿದೆ.
ಇನ್ನೊಂದು ಪ್ರಕರಣದಲ್ಲಿ, ಭಾರತ ವಿವಿಧತೆಯಲ್ಲಿ ಏಕತೆ ಇರುವ ದೇಶ. ಈ ಅಂಶವನ್ನು ಕಾಪಾಡಿಕೊಳ್ಳುವ ಮಾರ್ಗದಲ್ಲಿ ಸುಪ್ರೀಂ ಮಹತ್ವದ ಆದೇಶ ಹೊರಡಿಸಿದೆ. ಉತ್ತರ ಪ್ರದೇಶ, ಛತ್ತೀಸ್‌ಗಢ, ಹರಿಯಾಣ, ಒಡಿಶಾ, ಮಧ್ಯಪ್ರದೇಶ, ಬಿಹಾರ, ಕರ್ನಾಟಕ ಮತ್ತು ಜಾರ್ಖಂಡ್‌ಗಳಿಂದ ಕ್ರಿಶ್ಚಿಯನ್ ಸಂಸ್ಥೆಗಳು ಮತ್ತು ಪಾದ್ರಿಗಳ ಮೇಲಿನ ದಾಳಿಗಳ ಕುರಿತು ಕೈಗೊಂಡ ಕ್ರಮಗಳ ಪರಿಶೀಲನಾ ವರದಿಗಳನ್ನು ಪಡೆಯುವಂತೆ ಸುಪ್ರೀಂ ಕೋರ್ಟ್ ಗೃಹ ಸಚಿವಾಲಯಕ್ಕೆ ಆದೇಶ ನೀಡಿದೆ.