ಅನಂತಪುರ, ಆಂಧ್ರಪ್ರದೇಶ: ಗಾರ್ಲದಿನ್ನೆ ತಾಲೂಕಿನ ಕಾನುಂಪಲ್ಲಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮೃತರನ್ನು ಕರ್ನಾಟಕದ ಕಲಬುರಗಿ ಜಿಲ್ಲೆಯವರು ಎಂದು ಗುರುತಿಸಲಾಗಿದೆ.
ಕೂಲಿಗಾಗಿ ಬೆಂಗಳೂರಿಗೆ ವಲಸೆ ಬಂದಿರುವುದು ಗೊತ್ತಾಗಿದ್ದು, ಮೃತರ ವಿಳಾಸ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿಗೆ ಸೇರಿದ ಚಾಕಲಿ ಭೀಮಪ್ಪ ಮತ್ತು ಚಾಕಲಿ ಮೋನಪ್ಪ ಎಂದು ಗುರುತಿಸಲಾಗಿದೆ. ಇವರಿಬ್ಬರು ಸಹೋದರರೆಂದು ತಿಳಿದು ಬಂದಿದೆ.
ಮೊಹರಂ ಆಚರಣೆಗಾಗಿ ಚಾಕಲಿ ಭೀಮಪ್ಪ ಮತ್ತು ಚಾಕಲಿ ಮೋನಪ್ಪ ಇಬ್ಬರು ಸ್ವಗ್ರಾಮಕ್ಕೆ ಆಗಮಿಸಿದ್ದರು. ಹಬ್ಬ ಮುಗಿಸಿಕೊಂಡು ಬೈಕ್ನಲ್ಲಿ ಹೊರಡುತ್ತಿರುವಾಗ ಕಾರು ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಘಟನೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಓದಿ:ಕೂದಲೆಳೆ ಅಂತರದಲ್ಲಿ ಬೈಕ್ ಸವಾರರು ಬಚಾವ್: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ