ನವದೆಹಲಿ:ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಒಳಗೊಂಡಂತೆ ದೇಶದ 14 ವಿಧಾನಸಭೆ ಹಾಗೂ ಎರಡು ಲೋಕಸಭೆ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆ ಮಾಡಿದೆ. ಹಾಗಾಗಿ, ಎಲ್ಲ ಕ್ಷೇತ್ರಗಳಲ್ಲೂ ಇಂದಿನಿಂದಲೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.
ಕರ್ನಾಟಕದ ಎರಡು ವಿಧಾನಸಭೆ ಕ್ಷೇತ್ರಗಳಾದ ಬಸವಕಲ್ಯಾಣ ಹಾಗೂ ಮಸ್ಕಿ ಜತೆಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಉಳಿದಂತೆ ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ. ಗುಜರಾತ್ನ ಮೊರ್ವಾ ಹಡಾಫ್, ಜಾರ್ಖಂಡ್ನ ಮಾಧಾಪೂರ್, ಮಧ್ಯಪ್ರದೇಶದ ದಮೋಹಾ, ಮಹಾರಾಷ್ಟ್ರದ ಪಂಢರಾಪುರ್, ಮಿಜೋರಾಂ, ನಾಗಲ್ಯಾಂಡ್, ಒಡಿಶಾ, ರಾಜಸ್ಥಾನದ ಮೂರು, ತೆಲಂಗಾಣದ ಹಾಗೂ ಉತ್ತರಾಖಂಡ್ನ ಒಂದು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.