ನವದೆಹಲಿ: 73ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ನವದೆಹಲಿಯ ರಾಜಪಥದಲ್ಲಿ ನಡೆದ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಗಮನಸೆಳೆಯಿತು. ಬೆಂಗಳೂರಿನ ಅದಿತಿ ಉರಾಳ್ ನೇತೃತ್ವದಲ್ಲಿ ಸ್ತಬ್ಧ ಚಿತ್ರ ಪ್ರದರ್ಶನ ನಡೆಯಿತು.
ಅದಿತಿ ಉರಾಳ್ ಜೊತೆ 12 ಕಲಾವಿದರು ಹೆಜ್ಜೆ ಹಾಕಿದ್ದು, ಕರ್ನಾಟಕದಿಂದ ಜಾಗತಿಕ ಮಾನ್ಯತೆ ಗಳಿಸಿದ ವಸ್ತುಗಳ ಸ್ತಬ್ಧಚಿತ್ರದಲ್ಲಿ ಪ್ರದರ್ಶಿಸಲಾಗಿದೆ. ಶಶಿಧರ ಅಡಪ ಕೈಚಳಕದಲ್ಲಿ ಈ ಸ್ತಬ್ಧಚಿತ್ರ ಅರಳಿದೆ. 'ಸಾಂಪ್ರದಾಯಿಕ ಕರಕುಶಲ ವಸ್ತುಗಳ ತೊಟ್ಟಿಲು' ಎಂಬ ವಿಷಯದ ಕುರಿತು ಈ ಸ್ತಬ್ಧಚಿತ್ರ ರೂಪಿಸಲಾಗಿದೆ.