ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಇಂದು ಪುನರ್ ರಚನೆ ಆಗುತ್ತಿದೆ. ಅನೇಕ ಹೊಸ ಮುಖಗಳಿಗೆ ಅವಕಾಶ ಸಿಗುವುದು ಬಹುತೇಕ ಖಚಿತವಾಗುತ್ತಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಕರ್ನಾಟಕದ ನಾಲ್ವರಿಗೆ ನಮೋ ಕ್ಯಾಬಿನೆಟ್ನಲ್ಲಿ ಸ್ಥಾನ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
'ಈಟಿವಿ ಭಾರತ'ಗೆ ಲಭ್ಯವಾಗಿರುವ ಉನ್ನತ ಮೂಲಗಳ ಮಾಹಿತಿ ಪ್ರಕಾರ, ಬೀದರ್ ಬಿಜೆಪಿ ಸಂಸದ ಭಗವಂತ್ ಖೂಬಾ, ಚಿತ್ರದುರ್ಗದ ಸಂಸದ ಆನೇಕಲ್ ನಾರಾಯಣಸ್ವಾಮಿ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ರಾಜ್ಯಸಭೆ ಸದಸ್ಯರಾಗಿರುವ ರಾಜೀವ್ ಚಂದ್ರಶೇಖರ್ ಅವರಿಗೆ ಮಂತ್ರಿಗಿರಿ ನೀಡಲಾಗುತ್ತಿದ್ದು, ಮೋದಿ ಸಂಪುಟದಲ್ಲಿ ಇವರಿಗೆ ರಾಜ್ಯ ಖಾತೆ ನೀಡಲು ನಿರ್ಧರಿಸಲಾಗಿದೆ.