ಬೆಂಗಳೂರು:ಇಷ್ಟರಲ್ಲೇ ಕರ್ನಾಟಕಕ್ಕೆ ಆಗಮಿಸಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಸರಣಿ ಟ್ವೀಟ್ ಗಳ ಮೂಲಕ ಕರ್ನಾಟಕದಲ್ಲಿ ತಾವು ಭಾಗವಹಿಸಲಿರುವ ಕಾರ್ಯಕ್ರಮಗಳ ಬಗ್ಗೆ ಪ್ರಧಾನಿಯವರು ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಕನ್ನಡದಲ್ಲಿ ಮಾಡಿದ ಟ್ವೀಟ್ ಸರಣಿಗಳಲ್ಲಿ ಹಂಚಿಕೊಂಡ ಮಾಹಿತಿ ಹೀಗಿದೆ:
ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ iisc bangalore, ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು.
ಇಂದು ಅಪರಾಹ್ನ, ನಾನು ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್), ಬೆಂಗಳೂರು ಇಲ್ಲಿ ಬೇಸ್ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ.150 ಟೆಕ್ ಹಬ್ ಗಳ ಲೋಕಾರ್ಪಣೆ ಕೂಡ ಮಾಡುವೆ. ಇವನ್ನು ಐಟಿಐಗಳನ್ನು ಉನ್ನತೀಕರಿಸಿ ಅಭಿವೃದ್ಧಿಗೊಳಿಸಲಾಗಿದೆ.
ಬೆಂಗಳೂರಿನ ಕಾರ್ಯಕ್ರಮದಲ್ಲಿ, 27,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಇಲ್ಲವೆ ಶಂಕುಸ್ಥಾಪನೆ. ಈ ಕಾಮಗಾರಿಗಳು ವಿವಿಧ ಕ್ಷೇತ್ರಗಳಿಗೆ ಸೇರಿದ್ದು ಬೆಂಗಳೂರಿನ ಹಾಗು ಸುತ್ತಮುತ್ತಲಿನ ಜನರ 'ಸುಗಮ ಜೀವನ'ಕ್ಕೆ ನೆರವಾಗಲಿದೆ.
ಸಂಜೆ 5.30ರ ವೇಳೆಗೆ ಮೈಸೂರು ತಲುಪುವೆ. ಅಲ್ಲಿಯೂ ಪ್ರಮುಖ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಲ್ಲವೆ ಶಿಲಾನ್ಯಾಸ ನೆರವೇರಿಸುವೆ. ಸುತ್ತೂರು ಮಠದ ಕಾರ್ಯಕ್ರಮದಲ್ಲಿಯೂ ಭಾಗಿಯಾಗುವೆ. ನಾಳೆ ಬೆಳಗ್ಗೆ, ಮೈಸೂರಿನಲ್ಲಿ ಯೋಗ ದಿನದ ಕಾರ್ಯಕ್ರಮವೂ ನೆರವೇರಲಿದೆ.